ಅಮಿತ್ ಶಾ
ರಾಜಕೀಯ
ಲಿಂಗಾಯತರಿಗೆ ಅಲ್ಪಸಂಖ್ಯಾತ ಸ್ಥಾನಮಾನ ಮತ ವಿಭಜನೆಯ ತಂತ್ರ: ಅಮಿತ್ ಶಾ
ಲಿಂಗಾಯಿತ ಸಮುದಾಯಕ್ಕೆ ಅಲ್ಪಸಂಖ್ಯಾತ ಸ್ಥಾನಮಾನ ನೀಡುವ ರಾಜ್ಯಸರ್ಕಾರದ ನಿರ್ಧಾರ ಮತ ವಿಭಜನೆಯ ತಂತ್ರವಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಆರೋಪಿಸಿದ್ದಾರೆ.
ಮೈಸೂರು: ಲಿಂಗಾಯಿತ ಸಮುದಾಯಕ್ಕೆ ಅಲ್ಪಸಂಖ್ಯಾತ ಸ್ಥಾನಮಾನ ನೀಡುವ ರಾಜ್ಯಸರ್ಕಾರದ ನಿರ್ಧಾರ ಮತ ವಿಭಜನೆಯ ತಂತ್ರವಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಆರೋಪಿಸಿದ್ದಾರೆ.
ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅಮಿತ್ ಶಾ, ಇದು ಬಿ. ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗುವುದನ್ನು ತಡೆಯುವ ಕಾರ್ಯತಂತ್ರವಾಗಿದೆ ಎಂದು ಟೀಕಿಸಿದರು.
ಸಿದ್ದರಾಮಯ್ಯ ಲಿಂಗಾಯಿತರ ಮತ ಹೊಡೆಯಲು ಯತ್ನಿಸುತ್ತಿದ್ದಾರೆ. ಆದರೆ, ಆ ಸಮುದಾಯಕ್ಕೆ ಅರಿವಿದೆ. ಚುನಾವಣೆ ನಂತರ ಬಿಜೆಪಿ ತನ್ನ ನಿಲುವನ್ನು ಸ್ಪಷ್ಪಪಡಿಸಲಿದೆ ಎಂದು ತಿಳಿಸಿದರು.
ಕಾಂಗ್ರೆಸ್ ಭ್ರಷ್ಟಾಚಾರದ ಸಂಕೇತವಾಗಿದೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರವನ್ನು ಕಿತ್ತೊಗೆಯಬೇಕೆಂಬುದು ಕರ್ನಾಟಕದ ಜನರ ಮನಸ್ಸಿಗೆ ಬಂದಿದೆ ಎಂದು ಅಮಿತ್ ಶಾ ಹೇಳಿದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ