
ಮೈಸೂರು : ಮುಂದಿನ ಐದು ವರ್ಷಗಳ ಕಾಲ ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಆಡಳಿತ ಪೂರ್ಣಗೊಳಿಸಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿ.ಎಸ್. ಯಡಿಯೂರಪ್ಪ ಅವರಿಗೆ ಮುಖ್ಯಮಂತ್ರಿ ಸ್ಥಾನ ತಪ್ಪಿಸುವ ದೃಷ್ಟಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಲಿಂಗಾಯತ , ವೀರಶೈವ ವಿವಾದ ಹುಟ್ಟುಹಾಕಿದ್ದಾರೆ. ಧರ್ಮ, ಜಾತಿಗಳ ಆಧಾರದ ಮೇಲೆ ಸಮಾಜವನ್ನು ಹೊಡೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಕೇಂದ್ರಸರ್ಕಾರ ಕರ್ನಾಟಕಕ್ಕೆ 79,000 ಕೋಟಿ ರೂ ಬಿಡುಗಡೆ ಮಾಡಿದೆ. ಆದರೆ, ಕಾಂಗ್ರೆಸ್ ಸರ್ಕಾರ ಅಭಿವೃದ್ಧಿ ಕಾರ್ಯ ಕೈಗೊಳ್ಳುವಲ್ಲಿ ಹಿಂದೆ ಬಿದ್ದಿದೆ. ಈ ಬಾರಿಯ ಚುನಾವಣೆಗೆ ದಕ್ಷತೆ ಹಾಗೂ ಭ್ರಷ್ಟಾಚಾರ ರಹಿತ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲಾಗುವುದು ಎಂದು ತಿಳಿಸಿದರು.
ಮಂಡ್ಯದಲ್ಲಿ ರೈತ ಮುಖಂಡರಿಂದ ಪ್ರತಿಭಟನೆ ಎದುರಿಸಿದ ಅಮಿತ್ ಶಾ, ರೈತರಿಗಾಗಿ ಕಾಂಗ್ರೆಸ್ ಸರ್ಕಾರ ಏನೂ ಮಾಡಿಲ್ಲ, ಕಳೆದ ಕೆಲ ವರ್ಷಗಳಲ್ಲಿ 3,500 ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ರೈತರ ಹಿತಾಸಕ್ತಿ ಕಾಪಾಡುವ ಚುನಾವಣಾ ಪ್ರಣಾಳಿಕೆ ರೂಪಿಸಲಾಗುವುದು ಎಂದು ತಿಳಿಸಿದರು.
Advertisement