ಚುನಾವಣಾ ಪ್ರಚಾರಕ್ಕಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು ರಾಜ್ಯಕ್ಕೆ ಭೇಟಿ ನೀಡುತ್ತಿರುವ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ ಅವರು, ಕರ್ನಾಟಕದಲ್ಲಿ ಮೋದಿ ಮ್ಯಾಜಿಕ್ ನಡೆಯುವುದಿಲ್ಲ. ಮೋದಿ, ಶಾ, ಯೋಗಿ ಆದಿತ್ಯನಾಥ್ ಯಾರನ್ನೇ ಕರೆ ತಂದರೂ ಜನರು ಈಗಾಗಲೇ ಕಾಂಗ್ರೆಸ್ ಪಕ್ಷವನ್ನು ಆಯ್ದುಕೊಂಡಿದ್ದು, ಇದರಿಂದ ಯಾವುದೇ ಪ್ರಯೋಜನವಾಗುವುದಿಲ್ಲ ಎಂದು ಹೇಳಿದ್ದಾರೆ.