ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಮಂಗಳವಾರದಿಂದ ರಾಜ್ಯದಲ್ಲಿ ಬಿಜೆಪಿ ಪರ ಪ್ರಚಾರ ನಡೆಸಲು ಮೈಸೂರಿಗೆ ಆಗಮಿಸುತ್ತಿರುವ ಪ್ರಧಾನಿ ಮೋದಿ ಅವರ ಆಗಮನ ಹಿನ್ನಲೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಇದು ಪ್ರಜಾ ಪ್ರಭುತ್ವ. ಪ್ರಧಾನಿ ಮೋದಿ ಅವರೊಂದಿಗೆ ನಮ್ಮ ವೈಯುಕ್ತಿ ದ್ವೇಷವೇನೂ ಇಲ್ಲ, ಅವರು ಕರ್ನಾಟಕಕ್ಕೆ ಆಗಮಿಸುವ ಕುರಿತು ನಮಗೆ ವಿರೋಧವಿಲ್ಲ. ಆದರೆ ಪ್ರಧಾನಿ ಮೋದಿ ಆಗಮಿಸಿದ ಮಾತ್ರಕ್ಕೆ ಕರ್ನಾಟಕದಲ್ಲಿ ಬಿಜೆಪಿ ಭವಿಷ್ಯವೇನೂ ಬದಲಾಗಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.