ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಮತ್ತೆರಡು ದಿನ ರಾಜ್ಯ ಪ್ರವಾಸ, ಉತ್ತರ ಕರ್ನಾಟಕದ ಹಲವೆಡೆ ಪ್ರಚಾರ

Published On :
ಬೆಂಗಳೂರು: ಮೇ 12ಕ್ಕೆ ನಡೆಯುವ ವಿಧಾನಸಭೆ ಚುನಾವಣೆ ಪ್ರಚಾರಕ್ಕಾಗಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮತ್ತೊಮ್ಮೆ ಕರ್ನಾಟಕಕ್ಕೆ ಆಗಮಿಸಲಿದ್ದಾರೆ. ಗುರುವಾರ ಮತ್ತು ಶುಕ್ರವಾರದಂದು ರಾಹುಲ್ ಗಾಂಧಿ ಬೀದರ್, ಕಲಬುರಗಿ, ಗದಗ ಮತ್ತು ಹಾವೇರಿಗಳಿಗೆ ಭೇಟಿ ನೀಡಲಿದ್ದಾರೆ.
ಗುರುವಾರದಂದುಬೆಳಿಗ್ಗೆ 11.30 ಕ್ಕೆ ಬೀದರ್ ಗೆ ಆಗಮಿಸಲಿರುವ ರಾಹುಲ್ ಗಾಂಧಿ ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಔರಾದ್ ಗೆ ತೆರಳಿ ಮತದಾರರು ಮತ್ತು ಬೆಂಬಲಿಗರೊಂದಿಗೆ ಅನೌಪಚಾರಿಕ ಸಭೆಯಲ್ಲಿ ಪಾಲ್ಗೊಳ್ಳುತ್ತಾರೆ.
ಬಳಿಕ ರಾಹುಲ್ ಭಾಲ್ಕಿ ಹಾಗೂ ಹುಮಾನಾಬಾದ್ ಗೆ ತೆರಳಲಿದ್ದು ಅಲ್ಲಿ ಸಹ ಸಾರ್ವಜನಿಕರು ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳ ಜತೆ ಸಭೆ ನಡೆಸಲಿದ್ದಾರೆ. ಅಲ್ಲಿಂದ ಅವರು ಬೀದರ್ ಗೆ ಬಸ್ ಮೂಲಕ ಆಗಮಿಸಲಿದ್ದಾರೆ. ಮಾರ್ಗ ಮಧ್ಯೆ ಅವರು ಸಂಜೆ 6.30ಕ್ಕೆ ಮನ್ನೇಕಳ್ಳಿಯಲ್ಲಿ ಇನ್ನೊಂದು ಸಭೆಯಲ್ಲಿ ಪಾಲ್ಗೊಳ್ಳುವರು.
ಬೀದರ್ ನಲ್ಲಿ ರಾತ್ರಿ ತಂಗಲಿರುವ ರಾಹುಲ್ ಶುಕ್ರವಾರ ಬೆಳಿಗ್ಗೆ ಕಲಬುರ್ಗಿಗೆ ಆಗಮಿಸಲಿದ್ದು ಅಲ್ಲಿಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಮತ್ತೆ ಬೀದರ್ ಗೆ ತೆರಳುವ ಗಾಂಧಿ ಅಲ್ಲಿಂದ ಹುಬ್ಬಳ್ಳಿ, ಗಜೇಂದ್ರಗಢಕ್ಕೆ ಆಗಮಿಸಲಿದ್ದು ಅಲ್ಲಿಂದ ರೋಣ , ಗದಗಕ್ಕೆ ಹೆಲಿಕಾಪ್ಟರ್ ನಲ್ಲಿ ಪ್ರಯಾಣ ಬೆಳೆಸಲಿದ್ದಾರೆ.
ರಾಹುಲ್ ಇಲ್ಲೆಲ್ಲಾ ಅಭ್ಯರ್ಥಿಗಳು ಹಾಗೂ ಸಾರ್ವಜನಿಕರೊಡನೆ ಸಭೆಗಳಲ್ಲಿ ಭಾಗವಹಿಸುವ ನಿರೀಕ್ಷೆ ಇದ್ದು ಶುಕ್ರವಾರ ಸಂಜೆ ಹುಬ್ಬಳ್ಳಿಯಿಂದ ಮತ್ತೆ ನವದೆಹಲಿಗೆ ವಾಪಾಸ್ ಆಗಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


