ಪ್ರಧಾನಿ ಮೋದಿ ಮೌಢ್ಯತೆಗೆ ಅಂಟಿಕೊಂಡಿರುವುದು ನಾಚಿಕೆಗೇಡು: ವಾಟಾಳ್ ನಾಗರಾಜ್

ಚಾಮರಾಜನಗರಕ್ಕೆ ಭೇಟಿ ನೀಡದೇ ಸಂತೆಮರಳ್ಳಿಯಲ್ಲಿ ಬಿಜೆಪಿ ಸಮಾವೇಶ ಮಾಡಿ ಹೋದ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾಟಾಳ್ ನಾಗರಾಜ್ ಕಿಡಿಕಾರಿದ್ದಾರೆ.
ವಾಟಾಳ್ ನಾಗರಾಜ್ (ಸಂಗ್ರಹ ಚಿತ್ರ)
ವಾಟಾಳ್ ನಾಗರಾಜ್ (ಸಂಗ್ರಹ ಚಿತ್ರ)
ಚಾಮರಾಜನಗರ: ಚಾಮರಾಜನಗರಕ್ಕೆ ಭೇಟಿ ನೀಡದೇ ಸಂತೆಮರಳ್ಳಿಯಲ್ಲಿ ಬಿಜೆಪಿ ಸಮಾವೇಶ ಮಾಡಿ ಹೋದ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾಟಾಳ್ ನಾಗರಾಜ್ ಕಿಡಿಕಾರಿದ್ದಾರೆ.
ಚಾಮರಾಜನಗರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ವಾಟಾಳ್ ನಾಗರಾಜ್, ಉಡಿಗಾಲದಲ್ಲಿ ಇಂದು ಪ್ರಚಾರ ನಡೆಸಿದರು. ಈ ವೇಳೆ ನಿನ್ನೆ ಸಂತೆಮರಹಳ್ಳಿಗೆ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾಟಾಳ್ ನಾಗರಾಜ್ ತೀವ್ರ ವಾಗ್ದಾಳಿ ನಡೆಸಿದರು. ಪ್ರಧಾನಿ ಮೋದಿ ಮೌಢ್ಯತೆಗೆ ಅಂಟಿರುವುದು ನಾಚಿಕೆಗೇಡು. ಜಿಲ್ಲಾ ಕೇಂದ್ರಕ್ಕೆ ಭೇಟಿ ನೀಡಿದರೆ ಅಧಿಕಾರ ಹೋಗುತ್ತದೆ ಎಂಬ ಭಯದಿಂದ ಪ್ರಧಾನಿ ಮೋದಿ ಜಿಲ್ಲೆಗೆ ಭೇಟಿ ನೀಡಿಲ್ಲ ಎಂದು ವಾಟಾಳ್ ಹೇಳಿದರು.
'ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ನನಗೆ ಗೌರವವಿದೆ. ಆದರೆ ಅವರೂ ಕೂಡ ಮೌಢ್ಯತೆಗೆ ಅಂಟಿಕೊಂಡಿರುವುದು ನಾಚಿಕೆಗೇಡಿನ ವಿಚಾರವಾಗಿದೆ. ತಮ್ಮದೇ ಪಕ್ಷದ ನಾಯಕರ ಮಾತಿಗೆ ಬೆಲೆ ನೀಡಿ ಪ್ರಧಾನಿ ನರೇಂದ್ರ ಮೋದಿ ನಗರಕ್ಕೆ ಭೇಟಿ ನೀಡಿಲ್ಲ. ಪ್ರಧಾನಿ ಮೋದಿ ಸ್ಥಳೀಯರಲ್ಲ. ಹೀಗಾಗಿ ಅವರದೇ ಪಕ್ಷದ ನಾಯಕರು ಅವರಿಗೆ ಈ ಬಗ್ಗೆ ಮಾಹಿತಿ ನೀಡಿ ಅವರು ಜಿಲ್ಲಾಕೇಂದ್ರಕ್ಕೆ ಭೇಟಿ ನೀಡದಂತೆ ಮಾಡಿದ್ದಾರೆ, ಅವರ ಮಾತಿಗೆ ಬೆಲೆ ನೀಡಿ ಪ್ರಧಾನಿ ಮೋದಿ ಚಾಮರಾಜನಗರಕ್ಕೆ ಬಂದಿಲ್ಲ. ಇದು ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯದ ಜನರಿಗೆ ಮಾಡಿರುವ ಅಪಮಾನವಾಗಿದ್ದು, ಕೂಡಲೇ ನರೇಂದ್ರ ಮೋದಿ, ರಾಜ್ಯದ ಮತ್ತು ದೇಶದ ಜನರ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದರು.
ಅಂತೆಯೇ ಈ ಬಗ್ಗೆ ನಾವು ನ್ಯಾಯಾಲಯದಲ್ಲೂ ಪ್ರಕರಣದ ದಾಖಲಿಸಿಲು ನಾವು ನಿರ್ಧರಿಸಿದ್ದೇವೆ ಎಂದು ವಾಟಾಳ್ ನಾಗರಾಜ್ ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com