ಸಜ್ಜನ ರಾಜಕಾರಣಿ ಶಾಸಕ ವಿಜಯ್ ಕುಮಾರ್ ಇನ್ನಿಲ್ಲ; ಜಯನಗರ ಕ್ಷೇತ್ರದ ಚುನಾವಣೆ ಮುಂದೂಡಿಕೆ ಸಾಧ್ಯತೆ

ಜಯನಗರ ಬಿಜೆಪಿ ಶಾಸಕ ವಿಜಯ್ ಕುಮಾರ್ (60) ಗುರುವಾರ ರಾತ್ರಿ ನಿಧನರಾಗಿದ್ದಾರೆ. ಕ್ಷೇತ್ರದಲ್ಲಿ ಗುರುವಾರ ಚುನಾವಣಾ ಪ್ರಚಾರ ಮಾಡುವಾಗ ಕುಸಿದು ಬಿದ್ದ...
ಬಿ.ಎನ್ ವಿಜಯ್ ಕುಮಾರ್
ಬಿ.ಎನ್ ವಿಜಯ್ ಕುಮಾರ್
Updated on: 
ಬೆಂಗಳೂರು:  ಜಯನಗರ ಬಿಜೆಪಿ ಶಾಸಕ ವಿಜಯ್ ಕುಮಾರ್ (60) ಗುರುವಾರ ರಾತ್ರಿ ನಿಧನರಾಗಿದ್ದಾರೆ.. 
ಕ್ಷೇತ್ರದಲ್ಲಿ ಗುರುವಾರ ಚುನಾವಣಾ ಪ್ರಚಾರ ಮಾಡುವಾಗ ಕುಸಿದು ಬಿದ್ದ ಅವರನ್ನು ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಗೆ ಕರೆತಂದಾಗಲೇ ಅವರ ಹೃದಯ ಬಡಿತ, ರಕ್ತದ ಒತ್ತಡ ಕುಸಿದಿತ್ತು. ಚಿಕಿತ್ಸೆ ಫಲಕಾರಿ ಆಗದೇ ರಾತ್ರಿ 1 ಗಂಟೆಗೆ ವಿಜಯ್‌ ಕುಮಾರ್‌ ವಿಧಿವಶರಾಗಿದ್ದಾರೆ.
ಹಲವು ದಿನಗಳಿಂದ ಅವರು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು. 2008 ಮತ್ತು 2013ರಲ್ಲಿ ಶಾಸಕರಾಗಿ ಆಯ್ಕೆ ಆಗಿದ್ದ ಅವರು, ಈ ಬಾರಿಯೂ ಕಣದಲ್ಲಿದ್ದರು. ವಿಧಾನಸಭೆ ಚುನಾವಣೆಯಲ್ಲಿ ಎರಡು ಬಾರಿ ಸೋಲು, ಎರಡು ಬಾರಿ ಗೆಲುವು ಕಂಡಿದ್ದ ವಿಜಯ್ ಕುಮಾರ್, ಐದನೇ ಬಾರಿ ಚುನಾವಣೆಗೆ ಸ್ಪರ್ಧಿಸಿದ್ದರು. ಕಳೆದ ತಿಂಗಳಷ್ಟೇ ಅವರಿಗೆ ಹೃದಯದಲ್ಲಿ ಸ್ಟಂಟ್ ಅಳವಡಿಸಲಾಗಿತ್ತು. ವಿಜಯ್ ಕುಮಾರ್ ಗೆ ವೈದ್ಯರು 2 ಕಿಲೋ ಮೀಟರ್ ಗಿಂತ ಹೆಚ್ಚು ನಡೆಯಬಾರದು ಎಂದು ಎಚ್ಚರಿಸಿದ್ದರು. ಆದರೆ ಚುನಾವಣೆ ಹಿನ್ನೆಲೆಯಲ್ಲಿ ವಿಜಯ್ ಕುಮಾರ್ ಬಿರುಸಿನ ಪ್ರಚಾರದಲ್ಲಿ ತೊಡಗಿದ್ದರು. 
ಬಿಜೆಪಿ ಶಾಸಕ ವಿಜಯ್ ಕುಮಾರ್ ವಿಧಿವಶರಾದ ಹಿನ್ನೆಲೆಯಲ್ಲಿ ಜಯನಗರ ಕ್ಷೇತ್ರದ ಚುನಾವಣೆ ಮುಂದೂಡಿಕೆ ಆಗುವುದು ಬಹುತೇಕ ಖಚಿತವಾಗಿದೆ. ಈ ಸಂಬಂಧ ಇಂದು ಬಿಜೆಪಿ ನಾಯಕರು ಚುನಾವಣಾ ಆಯೋಗಕ್ಕೆ ಭೇಟಿ ನೀಡಲಿದ್ದಾರೆ. ಜಯನಗರ ಕ್ಷೇತ್ರದ ತಮ್ಮ ಅಭ್ಯರ್ಥಿ ವಿಧಿವಶರಾಗಿದ್ದು, ಬೇರೆ ಅಭ್ಯರ್ಥಿಯನ್ನು ಚುನಾವಣಾ ಕಣಕ್ಕಿಳಿಸಲು ಸಮಯಾವಕಾಶ ಇಲ್ಲದ ಕಾರಣ ಈ ಕ್ಷೇತ್ರದ ಚುನಾವಣೆಯನ್ನು ಮುಂದೂಡುವಂತೆ ಮನವಿ ಮಾಡಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com