ರಾಜಕೀಯ

ಬಿಜೆಪಿ ಪ್ರಣಾಳಿಕೆ ಕಾಂಗ್ರೆಸ್ ಪ್ರಣಾಳಿಕೆಯ ನಕಲು: ಸಿಎಂ ಸಿದ್ದರಾಮಯ್ಯ

ಬಿಜೆಪಿ ಪ್ರಣಾಳಿಕೆ ಕಾಂಗ್ರೆಸ್ ಪ್ರಣಾಳಿಕೆಯ ನಕಲು: ಸಿಎಂ ಸಿದ್ದರಾಮಯ್ಯ
ಸಿದ್ದರಾಮಯ್ಯ
Published On :
ದಾವಣಗೆರೆ: ಬಿಜೆಪಿ ಶುಕ್ರವಾರ ಬಿಡುಗಡೆ ಮಾಡಿರುವ ಪ್ರಣಾಳಿಕೆ ಕಾಂಗ್ರೆಸ್ ಪ್ರಣಾಳಿಕೆಯ ನಕಲು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಇಂದು ದಾವಣಗೆರೆ ಜಿಲ್ಲೆಯ ಸಂತೇಬೆನ್ನೂರಿನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ವಡ್ನಾಳ್‌ ರಾಜಣ್ಣ ಅವರ ಪರ ಪ್ರಚಾರ ಮಾಡಿದ ಸಿಎಂ, ಬಿಜೆಪಿ ‘ಅನ್ನಪೂರ್ಣ’ ಎಂಬ ಹೆಸರಿಟ್ಟು ‘ಇಂದಿರಾ ಕ್ಯಾಂಟೀನ್’, ಅನ್ನಭಾಗ್ಯ ಯೋಜನೆಗಳನ್ನು ಕಾಪಿ ಮಾಡಿದೆ. ಈ ಮೊದಲು ಕೂಡ ಪ್ರಣಾಳಿಕೆ ಮಾಡಿದ್ದಾರೆ. ಆದ್ರ ಯಾವೂ ಜಾರಿಗೆ ಬಂದಿಲ್ಲ ಎಂದು ವ್ಯಾಗ್ದಾಳಿ ನಡೆಸಿದರು.
‘ಕ್ಯೂ ಜೂಟ್ ಬೋಲ್ ರಹೇ ಹೋ. ಕಿತನಾ ಜೂಟ್ ಬೋಲ್ ರಹೋಗೆ’ ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹಿಂದಿಯಲ್ಲಿಯೇ ಸಿಎಂ ಪ್ರಶ್ನಿಸಿದರು. 
ಬಿಜೆಪಿಯವರು ಬರೀ ಸುಳ್ಳು ಹೇಳುತ್ತಾರೆ. ಈಗ ಸಾಲ ಮನ್ನಾ ಬಗ್ಗೆ ಮಾತನಾಡುವವರು ಯಡಿಯೂರಪ್ಪ ಅಧಿಕಾರದಲ್ಲಿದ್ದಾಗ ಏಕೆ ಸಾಲ ಮನ್ನಾ ಮಾಡಲಿಲ್ಲ ಎಂದು ಪ್ರಶ್ನಿಸಿದರು.                         
ಬಿಜೆಪಿ ನಡಿಗೆ ದಲಿತರ ಕಡೆಗೆ ಎಂದು ಹೇಳಿ, ಹೊಟೇಲ್‌ ತಿಂಡಿ ತಂದು ದಲಿತರ ಮನೆಯಲ್ಲಿ ತಿನ್ನುವ ಜಾಯಮಾನ ನಮ್ಮದಲ್ಲ. ಎಸ್‌ಟಿಪಿ, ಟಿಎಸ್‌ಪಿ ಯೋಜನೆಯಡಿ ₹ 89 ಸಾವಿರ ಕೋಟಿ ಹಣವನ್ನು ದಲಿತರಿಗಾಗಿ ಖರ್ಚು ಮಾಡಲಾಗಿದೆ. ಗುತ್ತಿಗೆ‌ ನೀಡುವಲ್ಲಿಯೂ ದಲಿತರಿಗೆ ಮೀಸಲಾತಿ ನೀಡಿದ್ದು, ದೇಶದಲ್ಲಿ ಕರ್ನಾಟಕ ಮಾತ್ರ ಎಂದರು.
ಬಿಜೆಪಿ 2008ರಲ್ಲಿ ಕರ್ನಾಟಕದಲ್ಲಿ ಬಿಡುಗಡೆ ಮಾಡಿದ್ದ ಪ್ರಣಾಳಿಕೆಯಲ್ಲಿ ಶೇ. 90ರಷ್ಟು ಭರವಸೆಗಳನ್ನು ಈಡೇರಿಸಿರಲಿಲ್ಲ. ಅದೇ ರೀತಿ ಈಗ ಬಿಡುಗಡೆ ಮಾಡಿರುವ ಪ್ರಣಾಳಿಕೆಗೂ ಆಗಲಿದೆ. ರಾಜ್ಯದ ಜನರ ಕಣ್ಣಿಗೆ ಮಣ್ಣೆರುಚುವ ಆಟ ನಮ್ಮ ಕರ್ನಾಟಕದಲ್ಲಿ ನಡೆಯುವುದಿಲ್ಲ ಎಂದು ಸಿದ್ದರಾಮಯ್ಯ ಟ್ವೀಟ್‌ ಮಾಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.