ಬಿಜೆಪಿ ರಾಜ್ಯಾಧ್ಯಕ್ಷ, ಮಾಜಿ ಸಿಎಂ, ಸಿಎಂ ಅಭ್ಯರ್ಥಿ, ಬಿಎಸ್ ಯಡಿಯೂರಪ್ಪ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಗೋಹತ್ಯೆ ನಿಷೇಧ ಮತ್ತು ಗೋವುಗಳ ಸಂರಕ್ಷಣೆ ಮಸೂದೆ-2012 ನ್ನು ಮತ್ತೆ ವಿಧಾನಸಭೆಯಲ್ಲಿ ಮಂಡಿಸಿ ಜಾರಿಗೆ ತರುವುದು, ರೈತರ, ಕೃಷಿ ಅಭಿವೃದ್ಧಿಗಾಗಿ ಯೋಜನೆಗಳನ್ನು ಜಾರಿಗೆ ತರುವುದೂ ಸೇರಿದಂತೆ ಹಲವು ಭರವಸೆಗಳನ್ನು ಪ್ರಣಾಳಿಕೆಯಲ್ಲಿ ನೀಡಲಾಗಿದೆ.