ಚುನಾವಣೆ ಮೇಲೆ ಸುಪ್ರೀಂ ಕೋರ್ಟ್ ತೀರ್ಪಿನ ಕಾವೇರಿ ನೀರಿನ ಕರಿ ನೆರಳು

ತಮಿಳುನಾಡಿಗೆ 4 ಟಿಎಂಸಿ ಕಾವೇರಿ ನೀರನ್ನು ಬಿಡುಗಡೆ ಮಾಡಬೇಕೆಂಬ ಸುಪ್ರೀಂ ಕೋರ್ಟ್ ನ ಆದೇಶ ...
ಕಾವೇರಿ ನೀರು
ಕಾವೇರಿ ನೀರು

ಮೈಸೂರು: ತಮಿಳುನಾಡಿಗೆ 4 ಟಿಎಂಸಿ ಕಾವೇರಿ ನೀರನ್ನು ಬಿಡುಗಡೆ ಮಾಡಬೇಕೆಂಬ ಸುಪ್ರೀಂ ಕೋರ್ಟ್ ನ ಆದೇಶ ಮತ್ತು ಆದೇಶವನ್ನು ಪಾಲಿಸದಿದ್ದರೆ ಕಠಿಣ ಕ್ರಮಗಳನ್ನು ಎದುರಿಸಬೇಕಾಗಬಹುದು ಎಂಬ ಎಚ್ಚರಿಕೆ ಇದೇ 12ರಂದು ನಡೆಯುವ ರಾಜ್ಯ ವಿಧಾನಸಭೆ ಚುನಾವಣೆ ಮೇಲೆ ಪ್ರಭಾವ ಬೀರುವ ಸಾಧ್ಯತೆಯಿದೆ.

ವಿಧಾನಸಭೆ ಚುನಾವಣೆ ಪ್ರಚಾರ ಅಂತಿಮ ಘಟ್ಟ ತಲುಪಿದ್ದು, ಕಾವೇರಿ ನೀರು ಬಿಡುಗಡೆ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಆದೇಶ ಹಳೆ ಮೈಸೂರು ಪ್ರಾಂತ್ಯದ ರಾಜಕೀಯ ಚಿತ್ರಣವನ್ನು ಬದಲಾಯಿಸುವ ಸಾಧ್ಯತೆಯಿದೆ. ತನ್ನ ಅಂತಿಮ ತೀರ್ಪಿನಲ್ಲಿ ಹೆಚ್ಚುವರಿ 18 ಟಿಎಂಸಿ ನೀರು ಬಿಡುಗಡೆ ಕೋರಿ ಸುಪ್ರೀಂ ಕೋರ್ಟ್ ಆದೇಶ ನೀಡಿದ ನಂತರ ಈ ಚುನಾವಣಾ ಪರ್ವದಲ್ಲಿ ಕಾವೇರಿ ವಿವಾದ ವಿಚಾರ ಹಿಂದಕ್ಕೆ ಸರಿದರೂ ಕೂಡ ನಿನ್ನೆಯ ಸುಪ್ರೀಂ ಕೋರ್ಟ್ ಆದೇಶದಿಂದ ವಿವಾದ ಮತ್ತೆ ಕೇಂದ್ರಬಿಂದುವಾಗಿದೆ.

ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಭರವಸೆ ನೀಡಿದಂತೆ ಅರೆ ಒಣ ಬೆಳೆಗಳಿಗೆ ಕಾವೇರಿ ನೀರನ್ನು ಬಿಡುಗಡೆ ಮಾಡಲು ನೀರಾವರಿ ಇಲಾಖೆ ನಿರಾಕರಿಸಿರುವುದು ಮೈಸೂರು ಭಾಗದ ಶಾಸಕರು ಸೇರಿದಂತೆ ರಾಜಕೀಯ ಪಕ್ಷಗಳು ಇಲ್ಲಿನ ರೈತರ ಕೆಂಗಣ್ಣಿಗೆ ಗುರಿಯಾಗುವ ಸಾಧ್ಯತೆಯಿದೆ. ಮಂಡ್ಯ, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳ ರೈತರು ಕುಡಿಯುವ ನೀರಿಗೆ, ಜಾನುವಾರುಗಳಿಗೆ ಕುಡಿಯುವ ನೀರಿಗೆ ಮತ್ತು ಕಬ್ಬು ಬೆಳೆಗಳಿಗೆ ನೀರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸುತ್ತಿದ್ದಾರೆ.

ನಿನ್ನೆಯ ವೇಳೆಗೆ ಕರ್ನಾಟಕ ರಾಜ್ಯಕ್ಕೆ 9.3 ಟಿಎಂಸಿ ನೀರು ಸಿಕ್ಕಿದ್ದು ಅದರಲ್ಲಿ 7 ಟಿಎಂಸಿ ನೀರು ಕೃಷ್ಣರಾಜ ಸಾಗರ, ಕಬಿನಿ, ಹೇಮಾವತಿ ಮತ್ತು ಹಾರಂಗಿ ಜಲಾಶಯಗಳಲ್ಲಿ ಲಭ್ಯವಿತ್ತು. ಕೆಆರ್ ಎಸ್ ನಲ್ಲಿ 3.42 ಟಿಎಂಸಿಗಿಂತ ಕಡಿಮೆ ನೀರು ಲಭ್ಯವಾಗಿತ್ತು.

ತಮಿಳುನಾಡಿಗೆ ಇನ್ನು ಹೆಚ್ಚಿನ ಕಾವೇರಿ ನೀರನ್ನು ಬಿಡುಗಡೆ ಮಾಡುವುದಿಲ್ಲ ಎಂದು ನೀರಾವರಿ ಸಚಿವ ಎಂ.ಬಿ.ಪಾಟೀಲ್ ಹೇಳಿದರೂ ಕೂಡ ಸುಪ್ರೀಂ ಕೋರ್ಟ್ ಆದೇಶ ಸರ್ಕಾರ ಮತ್ತು ನೀರಾವರಿ ಇಲಾಖೆಯನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಬೆಂಗಳೂರು, ಮೈಸೂರು, ಮಂಡ್ಯ ಮತ್ತು ಇತರ ನಗರ ಹಾಗೂ ಪಟ್ಟಣಗಳ ಒಂದೂವರೆ ಕೋಟಿ ಜನರಿಗೆ ಕುಡಿಯುವ ನೀರಿಗೆ ತತ್ವರವಾಗಿದೆ. ಕುಡಿಯುವ ನೀರು ಪೂರೈಕೆ ಸರ್ಕಾರದ ಆದ್ಯ ಕರ್ತವ್ಯವಾಗಿದೆ ಎಂದು ಲೋಕೋಪಯೋಗಿ ಸಚಿವ ಹೆಚ್.ಸಿ.ಮಹದೇವಪ್ಪ ಕೂಡ ಹೇಳಿದ್ದಾರೆ.

ಸುಪ್ರೀಂ ಕೋರ್ಟ್ ಆದೇಶದಿಂದ ರಾಜ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಬಹುದು ಎಂದು ಶ್ರೀರಂಗಪಟ್ಟಣದ ಬಿಜೆಪಿ ಅಭ್ಯರ್ಥಿ ನಂಜೇಗೌಡ ನೂರಾರು ಬೆಂಬಲಿಗರೊಂದಿಗೆ ಮೌನ ಮೆರವಣಿಗೆ ಹಮ್ಮಿಕೊಂಡಿದ್ದರು. ತಮಿಳುನಾಡಿಗೆ ನೀರು ಬಿಡಬಾರದು ಎಂದು ಕಾವೇರಿ ರೈತ ಹಿತರಕ್ಷಣಾ ಸಮಿತಿ ಅಧ್ಯಕ್ಷ ಮತ್ತು ಮಾಜಿ ಸಂಸದ ಜಿ.ಮಾದೇಗೌಡ ಸರ್ಕಾರವನ್ನು ಒತ್ತಾಯಿಸಿದರು.

ನಿನ್ನೆಯ ಹೊತ್ತಿಗೆ ಕೆಆರ್ ಎಸ್ ನಲ್ಲಿ 72.46 ಟಿಎಂಸಿ ನೀರು ಇದೆ. ಕಳೆದ ವರ್ಷ ಇದೇ ಸಮಯಕ್ಕೆ 71.92 ಟಿಎಂಸಿಗಳಿಷ್ಟಿದ್ದವು. 115 ಕ್ಯೂಸೆಕ್ಸ್ ಒಳಹರಿವು ಮತ್ತು 986 ಹೊರಹರಿವು ಇದ್ದವು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com