ಉತ್ತರ ಪ್ರದೇಶದಲ್ಲಿ ಬಿರುಗಾಳಿಗೆ 73 ಸಾವು, ಕರ್ನಾಟಕ ಪ್ರವಾಸ ಮೊಟಕುಗೊಳಿಸಿದ ಯೋಗಿ ಆದಿತ್ಯನಾಥ್

ಉತ್ತರ ಪ್ರದೇಶದಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಗೆ 73ಕ್ಕೂ ಹೆಚ್ಚು ಮಂದಿ ಮೃತಪಟ್ಟ ಹಿನ್ನೆಲೆಯಲ್ಲಿ ಕರ್ನಾಟಕ ವಿಧಾನಸಭೆ...
ಯೋಗಿ ಆದಿತ್ಯನಾಥ್
ಯೋಗಿ ಆದಿತ್ಯನಾಥ್
Updated on
ಬೆಂಗಳೂರು: ಉತ್ತರ ಪ್ರದೇಶದಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಗೆ 73ಕ್ಕೂ ಹೆಚ್ಚು ಮಂದಿ ಮೃತಪಟ್ಟ ಹಿನ್ನೆಲೆಯಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆ ಪ್ರಚಾರದಲ್ಲಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಶುಕ್ರವಾರ ತಮ್ಮ ಪ್ರಚಾರವನ್ನು ದಿಢೀರ್ ಮೊಟಕುಗೊಳಿಸಿ ತವರು ರಾಜ್ಯಕ್ಕೆ ಮರಳಿದ್ದಾರೆ.
ಯೋಗಿ ಆದಿತ್ಯನಾಥ್ ಅವರು ನಾಳೆ ಮಧ್ಯಾಹ್ನದವರೆಗೆ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿ , ಇನ್ನು ಎರಡು ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಬೇಕಿತ್ತು. ಆದರೆ ಭಾರಿ ಮಳೆಯಿಂದ ತತ್ತರಿಸಿರುವ ಉತ್ತರ ಪ್ರದೇಶ ಜನತೆಗೆ ಸ್ಪಂದಿಸಲು ತಮ್ಮ ಪ್ರವಾಸ ಮೊಟಕುಗೊಳಿಸಿದ್ದಾರೆ.
ಉತ್ತರ ಪ್ರದೇಶದಲ್ಲಿ ಪ್ರಕೃತಿ ವಿಕೋಪದಿಂದಾಗಿ ಜನಜೀವನ ಜರ್ಝರಿತವಾಗಿದೆ. ಆದರೆ ಅವರ ಮುಖ್ಯಮಂತ್ರಿ ಮಾತ್ರ ಚುನಾವಣಾ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿಎಂ ಯೋಗಿ ಅವರನ್ನು ಕಟುವಾಗಿ ಟೀಕಿಸಿದ್ದರು.
ಮೃತಪಟ್ಟವರ ಕುಟುಂಬದವರ ಬಗ್ಗೆ ಮತ್ತು ಪ್ರೀತಿಪಾತ್ರರ ಬಗ್ಗೆ ನನಗೆ ಸಂತಾಪವಿದೆ. ಕ್ಷಮಿಸಿ, ನಿಮ್ಮ ಮುಖ್ಯಮಂತ್ರಿ ಕರ್ನಾಟಕಕ್ಕೆ ಬೇಕಾಗಿದ್ದಾರೆ. ಅವರು ಶೀಘ್ರದಲ್ಲೇ ನಿಮ್ಮಲ್ಲಿಗೆ ಬಂದು ಕೆಲಸದಲ್ಲಿ ತೊಡಗಿಸಿಕೊಳ್ಳುವ ಬಗ್ಗೆ ಭರವಸೆ ಇದೆ ಸಿದ್ದರಾಮಯ್ಯ ನಿನ್ನೆ ಟ್ವೀಟ್ ಮಾಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com