ಇದೇ ವೇಳೆ ಕಾಂಗ್ರೆಸ್, ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದ ಯಡಿಯೂರಪ್ಪ, ಜೆಡಿಎಸ್ ಮುಖಂಡರು ಪಕ್ಷದ ಪರ ಒಟ್ಟಿಗೆ ಪ್ರಚಾರ ಮಾಡುವುದಿಲ್ಲ. ಇನ್ನು ಕಾಂಗ್ರೆಸ್ ಸಹ ಮೂರು ಭಾಗವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಜಿ ಪರಮೇಶ್ವರ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ್ ಖರ್ಗೆ ಒಂದೇ ವೇದಿಕೆಯಲ್ಲಿ ಭಾಗವಹಿಸುವುದಿಲ್ಲ ಎಂದರು.