ಕರ್ನಾಟಕದಲ್ಲಿ ಬಿಜೆಪಿ ವಿರುದ್ಧ ವಾತಾವರಣ ನಿರ್ಮಾಣಗೊಂಡಿದೆ. ಗುಜರಾತ್ ರಾಜ್ಯದಲ್ಲಿಯೂ ಬಿಜೆಪಿ ಬಹುಮತದಿಂದ ಗೆಲವು ಸಾಧಿಸಲಿಲ್ಲ. ರಾಜಸ್ತಾನ ಮತ್ತು ಉತ್ತರಪ್ರದೇಶ ಉಪ ಚುನಾವಣೆಯಲ್ಲಿ ಸೋಲು ಕಂಡಿದೆ ಎಂದು ಕಾಂಗ್ರೆಸ್ ನಾಯಕ ಶಶಿ ತರೂರ್ ಅವರು ಶುಕ್ರವಾರ ಹೇಳಿದ್ದಾರೆ...
ಬೆಂಗಳೂರು: ಕರ್ನಾಟಕದಲ್ಲಿ ಬಿಜೆಪಿ ವಿರುದ್ಧ ವಾತಾವರಣ ನಿರ್ಮಾಣಗೊಂಡಿದೆ. ಗುಜರಾತ್ ರಾಜ್ಯದಲ್ಲಿಯೂ ಬಿಜೆಪಿ ಬಹುಮತದಿಂದ ಗೆಲವು ಸಾಧಿಸಲಿಲ್ಲ. ರಾಜಸ್ತಾನ ಮತ್ತು ಉತ್ತರಪ್ರದೇಶ ಉಪ ಚುನಾವಣೆಯಲ್ಲಿ ಸೋಲು ಕಂಡಿದೆ ಎಂದು ಕಾಂಗ್ರೆಸ್ ನಾಯಕ ಶಶಿ ತರೂರ್ ಅವರು ಶುಕ್ರವಾರ ಹೇಳಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಎ.ಸಿ.ಶ್ರೀನಿವಾಸ್ ಪರ ಪ್ರಚಾರ ನಡೆಸುವ ಸಲುವಾಗಿ ವೈಟ್'ಫೀಲ್ಡ್'ಗೆ ಭೇಟಿ ನೀಡಿದ್ದ ಶಶಿ ತರೂರ್ ಅವರು ಸ್ಥಳೀಯ ನಾಗರೀಕರೊಂದಿಗೆ ಮಾತುಕತೆ ನಡೆಸಿದರು.
ಈ ವೇಳೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಕರ್ನಾಟಕ ರಾಜ್ಯದಲ್ಲಿ ಬಿಜೆಪಿ ವಿರುದ್ಧ ವಾತಾವರಣ ನಿರ್ಮಾಣಗೊಂಡಿದೆ. ಕರ್ನಾಟಕ ಅತ್ಯಂತ ದೊಡ್ಡ ರಾಜ್ಯವಾಗಿದ್ದು, ಕಾಂಗ್ರೆಸ್ ಹಿಡಿತದಲ್ಲಿದೆ. ಹೀಗಾಗಿ ಬಿಜೆಪಿ ಅಧಿಕಾರಕ್ಕೆ ಬಾರದಂತೆ ನೋಡಿಕೊಳ್ಳಬೇಕು ಎಂದು ಹೇಳಿದ್ದಾರೆ.
ಇನ್ನು ತಮ್ಮ ಸಮಸ್ಯೆಗಳ ಕುರಿತು ಮಾತನಾಡಿರುವ ಸ್ಥಳೀಯರು, ಕ್ಷೇತ್ರದಲ್ಲಿ ಸಾಕಷ್ಟು ಸಮಸ್ಯೆಗಳಿವೆ. ಶಾಸಕ ಅರವಿಂದ ಲಿಂಬಾವಳಿಯವರು ಸರ್ಕಾರದ ವಿರುದ್ದ ಆರೋಪಗಳನ್ನು ಮಾಡುತ್ತಲೇ ಇರುತ್ತಾರೆ, ಅಭಿವೃದ್ಧಿ ಚಟುವಟಿಕೆಗಯಲ್ಲಿ ಕಾಂಗ್ರೆಸ್ ಸರ್ಕಾರ ಏನನ್ನೂ ಮಾಡುತ್ತಿಲ್ಲ ಎಂದು ಹೇಳುತ್ತಾರೆಂದಿದ್ದಾರೆ.