ಜನರ ಮನಸ್ಸಿನಲ್ಲಿ ಯಡಿಯೂರಪ್ಪ, ರೆಡ್ಡಿ ಸಹೋದರರು ಮೋಸ್ಟ್ ವಾಂಟೆಡ್ ಪಟ್ಟಿಯಲ್ಲಿ: ಶಶಿ ತರೂರ್

ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿನ ಎಲ್ಲಾ ವರ್ಗದವರ ಜನತೆ ಪರ ಕೆಲಸ ಮಾಡಿದೆ. ಆದರೆ, ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಬಿ.ಎಸ್.ಯಡಿಯೂರಪ್ಪ ಹಾಗೂ ರೆಡ್ಡಿ ಸಹೋದರರನ್ನು ದೇಶದ ಜನ ಮೋಸ್ಟ್ ವಾಂಟೆಡ್ ಪಟ್ಟಿಯಲ್ಲಿರುವಂತೆ ಓದುತ್ತಾರೆ ಎಂದು ಕಾಂಗ್ರೆಸ್ ಮುಖಂಡ ಶಶಿ ತರೂರ್ ಹೇಳಿದ್ದಾರೆ.
ಶಶಿ ತರೂರ್ ಸುದ್ದಿಗೋಷ್ಠಿ
ಶಶಿ ತರೂರ್ ಸುದ್ದಿಗೋಷ್ಠಿ
Updated on: 

ಬೆಂಗಳೂರು: ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿನ ಎಲ್ಲಾ ವರ್ಗದವರ ಜನತೆ ಪರ ಕೆಲಸ ಮಾಡಿದೆ. ಆದರೆ, ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಬಿ.ಎಸ್.ಯಡಿಯೂರಪ್ಪ ಹಾಗೂ  ರೆಡ್ಡಿ ಸಹೋದರರನ್ನು ದೇಶದ ಜನ ಮೋಸ್ಟ್ ವಾಂಟೆಡ್ ಪಟ್ಟಿಯಲ್ಲಿರುವಂತೆ ಓದುತ್ತಾರೆ ಎಂದು ಕಾಂಗ್ರೆಸ್ ಮುಖಂಡ ಶಶಿ ತರೂರ್  ಹೇಳಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರು  ಇತರ ನಗರಗಳಿಗಿಂತ ಹೆಚ್ಚಿನ ಪ್ರಮಾಣದ ಹೂಡಿಕೆ ಆಕರ್ಷಿಸುತ್ತಿದೆ. ಇಂತಹ ನಗರವನ್ನು ಪ್ರಧಾನಿ ನರೇಂದ್ರಮೋದಿ ಹೊಗಳಿ ಪ್ರೋತ್ಸಾಹಿಸುವ ಬದಲು ಗಾರ್ಬೆಜ್ ಸಿಟಿ ಎಂದು ಹೇಳುವ ಮೂಲಕ ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದಂತೆ ನಡೆದಿದ್ದು, ನಾಲ್ಕು ವರ್ಷ ಪೂರ್ಣಗೊಳಿಸಿದ ಮೊದಲ ಮುಖ್ಯಮಂತ್ರಿಯಾಗಿದ್ದಾರೆ.  ಸ್ಥಿರ ಸರ್ಕಾರ ನೀಡಿದ್ದು, ಹಲವು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ ಎಂದು ಶಶಿತರೂರ್ ಮೆಚ್ಚುಗೆ ವ್ಯಕ್ತಪಡಿಸಿದರು.

 ಈ ಮಧ್ಯೆ ಮಾತನಾಡಿದ ಕೇರಳದ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ,  ಮೋದಿ ಸರ್ಕಾರದ ಅವಧಿಯಲ್ಲಿ ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು 9 ಬಾರಿ ಹೆಚ್ಚಿಸಲಾಗಿದ್ದು, 2, 50, 000 ಕೋಟಿ ಸಂಗ್ರಹಿಸಲಾಗಿದೆ. ಆದರೂ ನಿರಂತರವಾಗಿ ಇಂಧನ ಬೆಲೆಯಲ್ಲಿ ಹೆಚ್ಚಳವಾಗುತ್ತಿದ್ದು, ಜನರನ್ನು ದಿವಾಳಿಯನ್ನಾಗಿ ಮಾಡಲಾಗುತ್ತಿದೆ ಎಂದು ಆರೋಪಿಸಿದರು.


Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com