ಬಿಜೆಪಿ, ಮೋದಿ ವಿರುದ್ಧ ಸಿದ್ದರಾಮಯ್ಯ ಮಾನನಷ್ಟ ಮೊಕದ್ದಮೆ

ಪ್ರಧಾನಮಂತ್ರಿ ನರೇಂದ್ರಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅಪರಾಧ ಮತ್ತು ನಾಗರಿಕ ಮಾನನಷ್ಟ ಮೊಕದ್ದಮೆ ನೋಟಿಸ್ ಕಳುಹಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ತಮ್ಮ ವಿರುದ್ಧದ ಭ್ರಷ್ಟಾಚಾರ ಆರೋಪಗಳಿಗೆ ಸಂಬಂಧಿಸಿದಂತೆ  ಪ್ರಧಾನಮಂತ್ರಿ ನರೇಂದ್ರಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ,  ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ  ಅಪರಾಧ ಮತ್ತು  ನಾಗರಿಕ ಮಾನನಷ್ಟ ಮೊಕದ್ದಮೆಯ ನೋಟಿಸ್ ಕಳುಹಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಪೊನ್ಜಿ ಯೋಜನೆಯೊಂದಿಗೆ ಸಂಪರ್ಕ ಹೊಂದಿದ್ದು,   35 ಸಾವಿರ ಜನರನ್ನು ಮೋಸಗೊಳಿಸಿದೆ  ಹಾಗೂ 40 ಲಕ್ಷ ರೂ. ಮೌಲ್ಯದ ವಾಚ್ ಸ್ವೀಕರಿಸಿದ್ದಾರೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದರು.


10 ಪರ್ಸೆಂಟ್  ಸಿದ್ದರಾಮಯ್ಯ, ಯೋಜನೆಗಳ ಅನುಮೋದನೆಗಾಗಿ ಎಲ್ಲಾ ನಿಯಮಗಳನ್ನು ಉಲ್ಲಂಘಿಸಿ, ವಿದೇಶಿ ಉದ್ಯಮಿಯೊಬ್ಬರಿಂದ   70 ಲಕ್ಷ ರೂ. ಮೌಲ್ಯದ ಹ್ಯೂಬ್ಲಟ್ ವಾಚ್ ನ್ನು  ಪಡೆದಿದ್ದಾರೆ ಎಂದು ಬಿ. ಎಸ್. ಯಡಿಯೂರಪ್ಪ ಟ್ವೀಟರ್ ಮೂಲಕ ಆರೋಪಿಸಿದ್ದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ 10 ಪರ್ಸೆಂಟ್ ಸರ್ಕಾರ  ಸೀದಾ ರುಪಯ್ಯಾ ಸರ್ಕಾರ ಕರ್ನಾಟಕದಲ್ಲಿ ಅಸ್ತಿತ್ವದಲ್ಲಿದೆ ಎಂದು ಪ್ರಧಾನಿ ನರೇಂದ್ರಮೋದಿ ಇತ್ತೀಚಿಗೆ ಉಡುಪಿಯಲ್ಲಿ ನಡೆದ ಚುನಾವಣಾ ಪ್ರಚಾರದ ಸಮಾವೇಶದಲ್ಲಿ ಆರೋಪಿಸಿದ್ದರು.

ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ನಾಯಕರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ ಎಂದು ಸುದ್ದಿಸಂಸ್ಥೆಯೊಂದು ವರದಿ ಮಾಡಿದೆ.


ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com