ದಾಸರಹಳ್ಳಿ : ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿ ಬಿಜೆಪಿಯ ಮುನಿರಾಜು

ಕಳೆದೆರಡು ವಿಧಾನಸಭಾ ಚುನಾವಣೆಗಳಲ್ಲಿ ಬಹುಮತದೊಂದಿಗೆ ಗೆಲುವು ಸಾಧಿಸಿದ್ದ ದಾಸರಹಳ್ಳಿ ಬಿಜೆಪಿ ಅಭ್ಯರ್ಥಿ ಮುನಿರಾಜು ಈ ಬಾರಿ ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿದ್ದಾರೆ.
ಮುನಿರಾಜು
ಮುನಿರಾಜು

ಬೆಂಗಳೂರು : ಕಳೆದೆರಡು ವಿಧಾನಸಭಾ ಚುನಾವಣೆಗಳಲ್ಲಿ ಬಹುಮತದೊಂದಿಗೆ  ಗೆಲುವು ಸಾಧಿಸಿದ್ದ ದಾಸರಹಳ್ಳಿ ಬಿಜೆಪಿ ಅಭ್ಯರ್ಥಿ ಮುನಿರಾಜು ಈ ಬಾರಿ ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿದ್ದಾರೆ.

ದಾಸರಹಳ್ಳಿ ಬಿಜೆಪಿ ಪ್ರಾಬಲ್ಯ ಹೊಂದಿರುವ ಕ್ಷೇತ್ರವಾಗಿದೆ. 2008ರ ವಿಧಾನಸಭಾ ಚುನಾವಣೆಯಲ್ಲಿ ಮುನಿರಾಜ್ ಕಾಂಗ್ರೆಸ್  ಅಭ್ಯರ್ಥಿ  ಬಿ.ಎಲ್. ಶಂಕರ್ ವಿರುದ್ಧ  11 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.  2013ರ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ, ಸಿ, ಅಶೋಕ್ ವಿರುದ್ಧ 22 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.

2013ರಲ್ಲಿ ಯಡಿಯೂರಪ್ಪ ಅವರ ಕರ್ನಾಟಕ ಜನತಾ ಪಾರ್ಟಿ ಬಿಜೆಪಿಯಲ್ಲಿ ವಿಲೀನ  ಹಾಗೂ ಕಾಂಗ್ರೆಸ್ ಪಕ್ಷದಲ್ಲಿನ ಭಿನ್ನಮತದಿಂದಾಗಿ ಮುನಿರಾಜ್ ಸುಲಭವಾಗಿ ಗೆಲುವು ಸಾಧಿಸಿದ್ದರು.  2008ರ ಚುನಾವಣೆಯಲ್ಲಿ ಟಿಕೆಟ್ ನಿರಾಕರಿಸಲಾಗಿದ್ದ ಕಾಂಗ್ರೆಸ್ಸಿನ ಪಿ.ಎನ್. ಕೃಷ್ಣಮೂರ್ತಿ ಅವರಿಗೆ ಈ ಬಾರಿ ಟಿಕೆಟ್ ನೀಡಲಾಗಿದೆ.

ಆದಾಗ್ಯೂ, ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಬಯಸಿದ್ದ ತಿಮ್ಮನಂಜಯ್ಯ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದು, ಪ್ರಚಾರ ನಡೆಸಲು ನಿರಾಕರಿಸಿದ್ದಾರೆ.  ಕೃಷ್ಣಮೂರ್ತಿ 10 ವರ್ಷಗಳ ಹಿಂದೆ ರಾಜರಾಜೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸಿ ಸೋಲುಂಡಿದ್ದರು.

2007ರಲ್ಲಿ ಹೊಸದಾಗಿ ರಚನೆಯಾದ ದಾಸರಹಳ್ಳಿ ಕ್ಷೇತ್ರ 2008ರಲ್ಲಿ ಮೊದಲ ಬಾರಿಗೆ ಚುನಾವಣೆ ಎದುರಿಸಿದೆ. ಪೀಣ್ಯ ಕೈಗಾರಿಕಾ ಪ್ರದೇಶ ಹಾಗೂ 10 ಹಳ್ಳಿಗಳು ಈ ಕ್ಷೇತ್ರ ವ್ಯಾಪ್ತಿಯೊಳಗೆ ಬರುತ್ತವೆ. ವಿವಿಧ  ಕೆಲಸ ಮಾಡುವ  12 ಲಕ್ಷ  ನೌಕರರಿದ್ದಾರೆ. ಆದಾಗ್ಯೂ, ಕೆಲವರ ಮತ ಇಲ್ಲಿ ಇಲ್ಲ.

ಹಲವು ಅಭಿವೃದ್ದಿ ಕೆಲಸಗಳನ್ನು ಮಾಡಿದ್ದು, ಈ ಬಾರಿಯೂ ಗೆಲುವುದ್ದಾಗಿ ಮುನಿರಾಜು ವಿಶ್ವಾಸ ವ್ಯಕ್ತಪಡಿಸುತ್ತಾರೆ.  ಕಾವೇರಿ ನೀರು ಪೂರೈಕೆ ಕೆಲಸ ಆರಂಭಗೊಂಡಿದ್ದು, ಒಳಚರಂಡಿ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ. 40 ಉದ್ಯಾನವನಗಳನ್ನು ಅಭಿವೃದ್ದಿಗೊಳಿಸಲಾಗಿದೆ ಎಂದು ಅವರು ಹೇಳುತ್ತಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com