ಗೋಕಾಕ್: ಮತದಾರರಿಗೆ ಲಂಚ ಪ್ರಕರಣ ಸಂಬಂಧ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಚುನಾವಣಾ ಆಯೋಗ ದೂರು ದಾಖಲಿಸಿದೆ.
ರಮೇಶ್ ಜಾರಕಿಹೊಳಿ ಮತದಾರರಿಗೆ ಹಣ ಹಂಚುತ್ತಿದ್ದರು ಯಾವುದೇ ಕಾನೂನು ಕ್ರಮ ಕೈಗೊಳ್ಳಲಿಲ್ಲ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಗೋಕಾಕ್ ನಲ್ಲಿ ಪ್ರತಿಭಟನೆ ನಡೆಸಿದರು. ಮತದಾರರಿಗೆ ಹಣ ಹಂಚುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು.
ಕೊನ್ನೂರು ಗ್ರಾಮದಲ್ಲಿ ದುರ್ಗಾದೇವಿ ದೇವಾಲಯಕ್ಕೆ ಭೇಟಿ ನೀಡಿದ ಸಚಿವರು ಮತದಾರರಿಗೆ ಹಣ ನೀಡಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ, ಸಂಬಂಧ ಪಟ್ಟವರು ಕಾನೂನು ಕ್ರಮ ಕೈಗೊಂಡ ಮೇಲೆ ಪ್ರತಿಭಟನೆ ವಾಪಸ್ ತೆಗೆದುಕೊಳ್ಳಲಾಯಿತು,
ಇದೇ ವೇಳೆ ಬಿಜೆಪಿ ಅಭ್ಯರ್ಥಿ ಅಶೋಕ್ ಪೂಜಾರಿ ಚುನಾವಣಾ ಆಯೋಗಕ್ಕೆ ಮೂರು ಪುಟಗಳ ಪತ್ರ ಬರೆದಿದ್ದಾರೆ, ಸಚಿವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ, ವಿಡಿಯೋ ಪರಿಶೀಲನೆ ನಡೆಸಿದ ನಂತರ ಚುನಾವಣಾ ಆಯೋಗ ಅಧಿಕಾರಿ ದಿನೇಶ್ ಕುಮಾರ್ ಗೋಕಾಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಿಲಿಸಿದ್ದಾರೆ.