ನರೇಂದ್ರ ಮೋದಿ ಅವರ ಪ್ರಚಾರ ಹೇಗಿದೆ ಎಂದರೆ ತಾವೇ ಸಿಎಂ ಅಭ್ಯರ್ಥಿಯೇನೋ ಎಂಬಂತೆ ಪ್ರಚಾರ ಮಾಡುತ್ತಿದ್ದಾರೆ. ಅವರು ತಾವೊಬ್ಬ ಪ್ರಧಾನಿ ಎಂಬುದನ್ನು ಮರೆತಿದ್ದಾರೆ. ಈ ಹಿಂದೆ ಲೋಕಸಭಾ ಚುನಾವಣೆ ವೇಳೆ ಕಪ್ಪುಹಣ ವಾಪಸ್ ತರುವುದಾಗಿ ಹೇಳಿದ್ದರು. ದೇಶದ ಪ್ರತೀ ಪ್ರಜೆಯ ಖಾತೆಗೆ 15 ಲಕ್ಷ ಠೇವಣಿ ಮಾಡುವುದಾಗಿ ಹೇಳಿದ್ದರು. ಅಂತೆಯೇ ದೇಶದಲ್ಲಿ 2 ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇನೆ ಎಂದೂ ಭರವಸೆ ನೀಡಿದರು. ಆದರೆ ಇವು ಯಾವುದೂ ಆಗಿಲ್ಲ. ಆದರೆ ಅಗತ್ಯ ವಸ್ತುಗಳು, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಈ ಸರ್ಕಾರದ ಸಾಧನೆಯಾಗಿದೆ. ಕಳೆದ ಮೂರು ವರ್ಷಗಳಲ್ಲಿ ಕಚ್ಛಾತೈಲ ಬೆಲೆಯಲ್ಲಿ ಭಾರಿ ಪ್ರಮಾಣದ ಇಳಿಕೆಯಾಗಿದೆ. ಆದರೆ ದೇಶದಲ್ಲಿ ಮಾತ್ರ ಪೆಚ್ರೋಲ್ ಬೆಲೆ ಇಳಿಕೆಯಾಗಿಲ್ಲ