ಕಾಂಗ್ರೆಸ್ ಗೆ ಎಸ್ ಡಿಪಿಐ ಬೆಂಬಲ ಆರೋಪ ತಳ್ಳಿಹಾಕಿದ ಸಿಎಂ ಸಿದ್ದರಾಮಯ್ಯ

ವಿಧಾನಸಭೆ ಚುನಾವಣೆಯಲ್ಲಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(ಎಸ್ ಡಿಪಿಐ) ಕಾಂಗ್ರೆಸ್ ಗೆ...
ಸಿದ್ದರಾಮಯ್ಯ
ಸಿದ್ದರಾಮಯ್ಯ
Updated on: 
ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(ಎಸ್ ಡಿಪಿಐ) ಕಾಂಗ್ರೆಸ್ ಗೆ ಬೆಂಬಲ ನೀಡುತ್ತಿದೆ ಎಂಬ ಆರೋಪವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ.
ಇಂದು ನಗರದಲ್ಲಿ ಎಸ್ ಡಿಪಿಐ ನಂಟಿನ ಕುರಿತು ವರದಿಗಾರರಿಗೆ ಪ್ರತಿಕ್ರಿಯಿಸಿದ ಸಿಎಂ, ಬಿಜೆಪಿ ಆಧಾರ ರಹಿತ ಮತ್ತು ರಾಜಕೀಯ ಪ್ರೇರಿತ ಆರೋಪಗಳನ್ನು ಮಾಡುತ್ತಿದೆ ಎಂದರು. 
ಆಧಾರ ರಹಿತ ಆರೋಪ ಮಾಡುವ ಬಿಜೆಪಿ ನಾಯಕರ ಮಾತುಗಳು ಕಾಮಿಡಿ ಶೋ ರೀತಿ ಭಾಸವಾಗುತ್ತಿದೆ ಎಂದು ಸಿಎಂ ವ್ಯಂಗ್ಯವಾಡಿದ್ದಾರೆ. 
ಬಿಜೆಪಿ ನಾಯಕರು ಯಾವುದೇ ಒಂದು ವಿಷಯದ ಮೇಲೆ ಮಾತನಾಡುವುದಿಲ್ಲ. ವೈಯಕ್ತಿಕವಾಗಿ ಅಟ್ಯಾಕ್ ಮಾಡುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ರೋಪಿಸಿದರು. 
ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧವೂ ವಾಗ್ದಾಳಿ ನಡೆಸಿದ ಸಿಎಂ, ಮೋದಿ ಅವರು ತೀರ ಕಳಮಟ್ಟಕ್ಕೆ ಇಳಿದಿರುವುದು ಸರಿಯಲ್ಲ. ಅಭಿವೃದ್ಧಿ ವಿಚಾರದಲ್ಲಿ ಅವರು ಮಾತನಾಡಿದ್ದರೆ, ತಪ್ಪಿರಲಿಲ್ಲ. ಆದರೆ, ವೈಯಕ್ತಿಕ ಆರೋಪ ಸರಿಯಲ್ಲ ಎಂದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com