ನಾನು ಪ್ರಧಾನಿ ಮೋದಿಗಿಂತ ಭಿನ್ನ, ಇನ್ಮುಂದೆ ಹೆಚ್ಚು ಪತ್ರಿಕಾಗೋಷ್ಠಿ ನಡೆಸುತ್ತೇನೆ: ರಾಹುಲ್

Published On :
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ 4 ವರ್ಷಗಳಲ್ಲಿ ಒಂದೇ ಒಂದು ಪತ್ರಿಕಾಗೋಷ್ಠಿ ನಡೆಸಿಲ್ಲ. ಆದರೆ ನಾನು ಅವರಿಗಿಂತ ಭಿನ್ನವಾಗಿದ್ದು, ಬೆಂಗಳೂರಿನಲ್ಲಿ ಹೆಚ್ಚು ಹೆಚ್ಚು ಪತ್ರಿಕಾಗೋಷ್ಠಿ ಮಾಡುತ್ತೇನೆ ಮತ್ತು ಆನಂದಿಸುತ್ತೇನೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಗುರುವಾರ ಹೇಳಿದ್ದಾರೆ.
ಇಂದು ನಗರದಲ್ಲಿ ಪ್ರಾದೇಶಿಕ ಮತ್ತು ರಾಷ್ಟ್ರೀಯ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಸಮಯದ ಅಭಾವದಿಂದ ಎಲ್ಲರಿಗೂ ಪ್ರಶ್ನೆ ಕೇಳುವ ಅವಕಾಶ ಸಿಕ್ಕಿಲ್ಲ. ಅದಕ್ಕಾಗಿ ಕ್ಷಮೆ ಇರಲಿ ಎಂದರು.
ನಮ್ಮ ಪ್ರಧಾನಿ ಕಳೆದ ನಾಲ್ಕು ವರ್ಷಗಳಲ್ಲಿ ಒಂದೇ ಒಂದು ಪತ್ರಿಕಾಗೋಷ್ಠಿ ನಡೆಸಿಲ್ಲ. ಆದರೆ ನಾನು ಹಲವು ಪತ್ರಿಕಾಗೋಷ್ಠಿಗಳನ್ನು ನಡೆಸುತ್ತಿದ್ದೇನೆ ಎಂದರು.
ಪ್ರಧಾನಿ ಮೋದಿ ಅವರು ಗಮನ ಕೇಂದ್ರೀಕರಿಸುವ ಉದ್ದೇಶದಿಂದ ನನ್ನ ಪ್ರಧಾನಿ ಮಹತ್ವಾಕಾಂಕ್ಷೆಯ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಆದರೆ ಈ ಚುನಾವಣೆ ರಾಹುಲ್ ಗಾಗಿ ನಡೆಯುತ್ತಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ತಿಳಿಸಿದರು.
2019ರಲ್ಲಿ ಕಾಂಗ್ರೆಸ್ ಬಹುಮತ ಪಡೆದರ ತಾವು ಪ್ರಧಾನಿಯಾಗಲು ಸಿದ್ಧ ಎಂದು ರಾಹುಲ್ ಘೋಷಿಸಿದ ನಂತರ ಪ್ರಧಾನಿ ಮೋದಿ ಅವರು ಕಾಂಗ್ರೆಸ್ ಅಧ್ಯಕ್ಷರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದರು. ಅಂತಹ ಅಪಕ್ವವಾದ ನಾಯಕನನ್ನು ದೇಶ ಯಾವತ್ತೂ ಒಪ್ಪಿಕೊಳ್ಳಲ್ಲ ಎಂದಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Narendra Modiನರೇಂದ್ರ ಮೋದಿRahul Gandhiರಾಹುಲ್ ಗಾಂಧಿಪತ್ರಿಕಾಗೋಷ್ಠಿKarnataka Assembly Electionpress conferences
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


