ನೀತಿ ಸಂಹಿತೆ ಉಲ್ಲಂಘನೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲು

ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆ ನೀತಿ ಸಂಹಿತೆ ಉಲ್ಲಂಘಿಸಿ ಮೇ 10 ಬಹಿರಂಗ ಚುನಾವಣಾ ಪ್ರಚಾರ ನಡೆಸಿರುವ ಆರೋಪ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ...
ಸಿದ್ದರಾಮಯ್ಯ
ಸಿದ್ದರಾಮಯ್ಯ
Updated on: 
ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆ ನೀತಿ ಸಂಹಿತೆ ಉಲ್ಲಂಘಿಸಿ ಮೇ 10 ಬಹಿರಂಗ ಚುನಾವಣಾ ಪ್ರಚಾರ ನಡೆಸಿರುವ ಆರೋಪ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. 
ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಅವರು ಬಹಿರಂಗ ಪ್ರಚಾರ ನಡೆಸಿರುವ ಆರೋಪ ಲೋಕೇಶ್ ಎಂಬುವರು ಮೈಸೂರು ಜಿಲ್ಲಾ ಚುನಾವಣಾಧಿಕಾರಿಗಳಿಗೆ ದೂರು ನೀಡಿದ್ದರು.
ಸಿದ್ದರಾಮಯ್ಯ ಅವರು ಮೇ 10ರಂದು ಚಾಮುಂಡೇಶ್ವರಿ ಕ್ಷೇತ್ರದ ಟಿ. ಕಾಟೂರ್, ಆಲನಹಳ್ಳಿ, ಗಿರಿದರ್ಶಿನಿ ಬಡಾವಣೆ, ನಾಡನಹಳ್ಳಿಯಲ್ಲಿ ನೂರಾರು ಕಾರ್ಯಕರ್ತರ ಜತೆ ಬಹಿರಂಗ ಪ್ರಚಾರ ನಡೆಸಿದ ಆರೋಪ ಎದುರಿಸುತ್ತಿದ್ದಾರೆ. ಈ ಸಂಬಂಧ ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. 
ಕರ್ನಾಟಕ ವಿಧಾನಸಭೆ ಚುನಾವಣೆಗೆ ಮೇ 12ರಂದು ಮತದಾನ ನಡೆಯಲಿದ್ದು ಈ ಹಿನ್ನೆಲೆಯಲ್ಲಿ ಮೇ 10ರಂದು ಸಂಜೆ 5ಗಂಟೆ ನಂತರ ಬಹಿರಂಗ ಚುನಾವಣಾ ಪ್ರಚಾರಕ್ಕೆ ತೆರೆ ಎಳೆಯಲಾಗಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com