ಮತದಾನೋತ್ತರ ಸಮೀಕ್ಷೆ: ಅತಂತ್ರ ವಿಧಾನಸಭೆ; ಕಾಂಗ್ರೆಸ್ - ಬಿಜೆಪಿ ನಡುವೆ ನೇರ ಹಣಾಹಣಿ

ರಾಷ್ಟ್ರ ರಾಜಕಾರಣದಲ್ಲೂ ತೀವ್ರ ಕುತೂಹಲ ಮೂಡಿಸಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಶನಿವಾರ ಒಂದೇ ಹಂತದಲ್ಲಿ....
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on
ನವದೆಹಲಿ: ರಾಷ್ಟ್ರ ರಾಜಕಾರಣದಲ್ಲೂ ತೀವ್ರ ಕುತೂಹಲ ಮೂಡಿಸಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಶನಿವಾರ ಒಂದೇ ಹಂತದಲ್ಲಿ ಮತದಾನ ನಡೆದಿದ್ದು, ಮೇ 15ರಂದು ಫ‌ಲಿತಾಂಶ ಪ್ರಕಟವಾಗಲಿದೆ.
ಮತದಾನ ಮುಕ್ತಾಯವಾದ ಬೆನ್ನಲ್ಲೇ ವಿವಿಧ ಮಾಧ್ಯಮಗಳು ನಡೆಸಿದ ಮತದಾನೋತ್ತರ ಸಮೀಕ್ಷೆ ಪ್ರಕಟಗೊಂಡಿದ್ದು, ಮತದಾರ ಈ ಬಾರಿ ಯಾವುದೇ ಪಕ್ಷಕ್ಕೂ ಸ್ಪಷ್ಟ ಬಹುಮತ ನೀಡದೇ ಅತಂತ್ರ ಸ್ಥಿತಿ ನಿರ್ಮಾಣ ಮಾಡಿದ್ದಾನೆ.
ಇಂಡಿಯಾ ಟುಡೇ ಗ್ರೂಪ್, ಆಕ್ಸಿಸ್ ಮೈ ಇಂಡಿಯಾ ನಡೆಸಿದ ಮತದಾನ ಪೂರ್ವ ಸಮೀಕ್ಷೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ 224 ಕ್ಷೇತ್ರಗಳ ಪೈಕಿ 106 ರಿಂದ 118 ಸ್ಥಾನಗಳನ್ನು ಪಡೆಯುವ ಮೂಲಕ ಏಕೈಕ ಅತಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮಲಿದೆ. 
ಪ್ರಮುಖ ಪ್ರತಿಪಕ್ಷ ಬಿಜೆಪಿ 79ರಿಂದ 92 ಸ್ಥಾನಗಳನ್ನು ಪಡೆಯಲಿದ್ದು, ಜೆಡಿಎಸ್ 22ರಿಂದ 30 ಸ್ಥಾನಗಳನ್ನು ಪಡೆಯಲಿದೆ.
ಇನ್ನು ನ್ಯೂಸ್ ಎಕ್ಸ್ ಎಕ್ಸಿಟ್ ಪೋಲ್ ಪ್ರಕಾರ, ಕಾಂಗ್ರೆಸ್ 72-78, ಬಿಜೆಪಿ 102-110, ಜೆಡಿಎಸ್ 35-39, ಇತರೆ 3-5 ಸ್ಥಾನ ಪಡೆಯಲಿದೆ.
ಪೀಪಲ್ಸ್ ಪಲ್ಸ್ ಸಮೀಕ್ಷೆ ಪ್ರಕಾರ, ಕಾಂಗ್ರೆಸ್ 93ರಿಂದ 103, ಬಿಜೆಪಿ 83ರಿಂದ 93 ಹಾಗೂ ಜೆಡಿಎಸ್ 33ರಿಂದ 43 ಸ್ಥಾನಗಳನ್ನು ಪಡೆಯುವ ಮೂಲಕ ಕಿಂಗ್ ಮೇಕರ್ ಆಗಲಿದೆ.

ರಿಪಬ್ಲಿಕ್ ಟಿವಿ ಜನ್ ಕೀ ಬಾತ್ ಸಮೀಕ್ಷೆಯಲ್ಲಿ ಕಾಂಗ್ರೆಸ್ 73-82, ಬಿಜೆಪಿ 95 -114, ಜೆಡಿಎಸ್ 32-43 ಹಾಗೂ ಇತರು 02-03 ಸ್ಥಾನಗಳನ್ನು ಪಡೆಯಲಿದ್ದಾರೆ.

ಇಂಡಿಯಾ ಟಿವಿ - ವಿಎಂಆರ್ ಎಕ್ಸಿಟ್ ಪೋಲ್ ಸಮೀಕ್ಷೆ ಪ್ರಕಾರ, ಕಾಂಗ್ರೆಸ್ 97, ಬಿಜೆಪಿ 87 ಹಾಗೂ ಜೆಡಿಎಸ್ 35 ಸ್ಥಾನಗಳನ್ನು ಪಡೆಯಲಿದೆ.

ಕಾಂಗ್ರೆಸ್ 90ರಿಂದ 103 ಸ್ಥಾನ, ಬಿಜೆಪಿ 82ರಿಂದ 93, ಜೆಡಿಎಸ್ 31ರಿಂದ 39 ಸ್ಥಾನ ಪಡೆದರೆ ಇತರರು 2ರಿಂದ 4 ಸ್ಥಾನ ಪಡೆಯಲಿದ್ದಾರೆ ಎಂದು ಟೈಮ್ಸ್ ನೌ- ವಿಎಂಆರ್ ಸಮೀಕ್ಷೆ ತಿಳಿಸಿದೆ.

224 ಸದಸ್ಯ ಬಲದ ಕರ್ನಾಟಕ ವಿಧಾನ ಸಭೆಯಲ್ಲಿ ಅಧಿಕಾರದ ಗದ್ದುಗೆ ಏರಲು ಸರಳ ಬಹುಮತಕ್ಕಾಗಿ ಯಾವುದೇ ಒಂದು ಪಕ್ಷ 113 ಸ್ಥಾನಗಳನ್ನು ಗೆಲ್ಲಬೇಕಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com