ಜೆಡಿಎಸ್ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ, ಜೆಡಿಎಸ್ ಅಭ್ಯರ್ಥಿ ಅಪಾರ ಪ್ರಮಾಣದಲ್ಲಿ ಜನರಿಗೆ ಮತಕ್ಕಾಗಿ ಹಣ ಹಂಚುತ್ತಿದ್ದಾರೆ, ಆದರೆ ಅವರು ಸೊಸೈಟಿ ಸೆಕ್ರೆಟರಿಯಾಗಿದ್ದರು, ಅವರ ಬಳಿ ಅಷ್ಟೊಂದು ಹಣ ಎಲ್ಲಿಂದ ಬಂತು ಎಂದು ಪ್ರಶ್ನಿಸಿದ್ದಾರೆ.
ಜೊತೆಗೆ ಬಿಜೆಪಿ ಯವರು ಜೆಡಿಎಸ್ ಪಕ್ಷದ ಅಭ್ಯರ್ಥಿಗೆ ಬಹಿರಂಗವಾಗಿ ಬೆಂಬಲ ನೀಡುತ್ತಿದ್ದಾರೆ, ಅವರು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಡಮ್ಮಿ ಅಭ್ಯರ್ಥಿ ಕಣಕ್ಕಿಳಿಸಿದ್ದಾರೆ ಎಂದು ಆರೋಪಿಸಿದ್ದಾರೆ.