60-70ಕ್ಕಿಂತಲೂ ಹೆಚ್ಚು ಸ್ಥಾನವನ್ನು ಬಿಜೆಪಿ ಗೆಲ್ಲುವುದಿಲ್ಲ; ಮಲ್ಲಿಕಾರ್ಜುನ ಖರ್ಗೆ

60-70ಕ್ಕಿಂತಲೂ ಹೆಚ್ಚು ಸ್ಥಾನವನ್ನು ಬಿಜೆಪಿ ಗೆಲ್ಲುವುದಿಲ್ಲ ಎಂದು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಯವರು ಶನಿವಾರ ಹೇಳಿದ್ದಾರೆ...
ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ
ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ
Updated on: 
ಕಲಬುರಗಿ; 60-70ಕ್ಕಿಂತಲೂ ಹೆಚ್ಚು ಸ್ಥಾನವನ್ನು ಬಿಜೆಪಿ ಗೆಲ್ಲುವುದಿಲ್ಲ ಎಂದು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಯವರು ಶನಿವಾರ ಹೇಳಿದ್ದಾರೆ. 
ರಾಜ್ಯ ವಿಧಾನಸಭಾ ಚುನಾವಣೆಯ ಮತದಾನ ಮುಂದುವರೆಯುತ್ತಿದ್ದು, ಈ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಕರ್ನಾಟಕದಲ್ಲಿ ಸರ್ಕಾರ ರಚನೆ ಮಾಡುತ್ತೇವೆಂದು ಬಿಜೆಪಿ ಕನಸು ಕಾಣುತ್ತಿದೆ ಎಂದು ಹೇಳಿದ್ದಾರೆ. 
150 ಸ್ಥಾನ ಬಿಡಿ, ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ 60-70ಕ್ಕಿಂತಲೂ ಹೆಚ್ಚು ಸ್ಥಾನ ಗೆಲ್ಲುವುದಿಲ್ಲ ಎಂಬ ವಿಶ್ವಾಸ ನಮಗಿದೆ. ರಾಜ್ಯದಲ್ಲಿ ಸರ್ಕಾರ ರಚನೆ ಮಾಡುತ್ತೇವೆಂದು ಬಿಜೆಪಿ ಕನಸು ಕಾಣುತ್ತಿದೆಯಷ್ಟೇ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com