ದಲಿತ ಸಿಎಂ ವಿಚಾರದ ಬಗ್ಗೆ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳಲಿದೆ: ಜಿ.ಪರಮೇಶ್ವರ್

ರಾಜ್ಯ ವಿಧಾನಸಭೆ ಚುನಾವಣೆಗೆ ಮತದಾನ ಮುಗಿದ ನಂತರ ರಿಲ್ಯಾಕ್ಸ್ ಮೂಡ್ ನಲ್ಲಿ ತಮ್ಮ ಸ್ವಕ್ಷೇತ್ರ ...
ಡಾ.ಜಿ.ಪರಮೇಶ್ವರ್
ಡಾ.ಜಿ.ಪರಮೇಶ್ವರ್

ತುಮಕೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಮತದಾನ ಮುಗಿದ ನಂತರ ರಿಲ್ಯಾಕ್ಸ್ ಮೂಡ್ ನಲ್ಲಿ ತಮ್ಮ ಸ್ವಕ್ಷೇತ್ರ ತುಮಕೂರಿಗೆ ಆಗಮಿಸಿದ್ದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಕಾಂಗ್ರೆಸ್ ಬಹುಮತದೊಂದಿಗೆ ಗೆದ್ದು ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ತುಮಕೂರಿನಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅತಂತ್ರ ವಿಧಾನಸಭೆ ಉಂಟಾಗುವ ಪ್ರಶ್ನೆ ಉದ್ಭವಿಸುವುದೇ ಇಲ್ಲ. ನಾವು ಮತ್ತೊಮ್ಮೆ ಸರ್ಕಾರ ರಚಿಸಲಿದ್ದೇವೆ ಎಂದು ಹೇಳಿದರು.ಯಾವ ಸುದ್ದಿವಾಹಿನಿಗಳ ಸಮೀಕ್ಷೆಗಳು ಕೂಡ ಕಾಂಗ್ರೆಸ್ ಗೆ ಅತ್ಯಂತ ಕಡಿಮೆ ಸ್ಥಾನಗಳ ಫಲಿತಾಂಶವನ್ನು ನೀಡಿಲ್ಲ. ಕಾಂಗ್ರೆಸ್ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ. ನಮಗೆ 120 ಸ್ಥಾನಗಳು ದೊರಕಿ ಸರ್ಕಾರ ರಚಿಸಲಿದ್ದೇವೆ ಎಂದರು.

ದಲಿತ ಮುಖ್ಯಮಂತ್ರಿಯ ಬಗ್ಗೆ ಕೇಳಲಾದ ಪ್ರಶ್ನೆಗೆ ಪರಮೇಶ್ವರ್, 2013ರಲ್ಲಿಯೇ ದಲಿತ ಅಭ್ಯರ್ಥಿ ಮುಖ್ಯಮಂತ್ರಿಯಾಗಬೇಕೆಂದು ಆಕಾಂಕ್ಷೆ ಹೊಂದಿದ್ದು ಈ ವಿಚಾರದ ಬಗ್ಗೆ ಪಕ್ಷದ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳಲಿದೆ ಎಂದರು.

ಮುಖ್ಯಮಂತ್ರಿ ಹುದ್ದೆಗೆ ಹತ್ತಕ್ಕೂ ಹೆಚ್ಚು ಅಭ್ಯರ್ಥಿಗಳು ಆಕಾಂಕ್ಷೆ ಹೊಂದಿದ್ದು ಅಂತಿಮವಾಗಿ ಕಾಂಗ್ರೆಸ್ ಶಾಸಕಾಂಗ ಪಕ್ಷ ನಿರ್ಧಾರ ತೆಗೆದುಕೊಳ್ಳಲಿದೆ. ಚುನಾವಣಾ ಫಲಿತಾಂಶ ಬಂದ ನಂತರ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದು ನಿಯಮ ಪ್ರಕಾರ ಪಕ್ಷದ ಆದೇಶದಂತೆ ಸಿದ್ದರಾಮಯ್ಯನವರನ್ನು ಮುಖ್ಯಮಂತ್ರಿ ಮಾಡಿದರೆ ನನಗೆ ಯಾವುದೇ ಆಕ್ಷೇಪವಿಲ್ಲ ಎಂದು ಪರಮೇಶ್ವರ್ ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com