

ಮಂಗಳೂರು : ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಶೇ. 75ಕ್ಕೂ ಹೆಚ್ಚು ಮತದಾನವಾಗಿದೆ. 2013ರ ಚುನಾವಣೆಗಿಂತಲೂ ಈ ಬಾರಿ ಎರಡು ಪಟ್ಟು ಹೆಚ್ಚಿನ ಮತದಾನವಾಗಿದೆ. ಇದು ಬಿಜೆಪಿ ಪಾಳಯದಲ್ಲಿ ಭರವಸೆಯನ್ನು ಹೆಚ್ಚಿಸಿದೆ.
ರಾಜಕೀಯ ವಿಶ್ಲೇಷಣೆ ಪ್ರಕಾರ , ಯಾವಾಗ ಮತದಾನ ಶೇ. 70ಕ್ಕಿಂತಲೂ ಹೆಚ್ಚಾದಾಗ ಫಲಿತಾಂಶ ಸ್ಥಾನಿಕ ಸರ್ಕಾರದ ಪರವಾಗಿರುವುದಿಲ್ಲ. ಕಾಂಗ್ರೆಸ್ ನಾಯಕರು ಕೂಡಾ ಈ ವಾದವನ್ನು ಒಪ್ಪುತ್ತಾರೆ. ಆದರೆ, ಮತದಾನ ಶೇ, 75ಕ್ಕಿಂತಲೂ ಹೆಚ್ಚಾದಾಗ ಮಾತ್ರ ಇದು ಸಾಧ್ಯ ಎನ್ನುತ್ತಾರೆ.
ಈ ಜಿಲ್ಲೆಗಳ 19 ವಿಧಾನಸಭಾ ಕ್ಷೇತ್ರಗಳ ಪೈಕಿ 12ರಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂದು ನಾಯಕರು ವಿಶ್ವಾಸ ಇಟ್ಟುಕೊಂಡಿದ್ದಾರೆ. ಈಗ 8 ರಿಂದ 10 ಸ್ಥಾನಗಳಲ್ಲಿ ಸುಲಭವಾಗಿ ಜಯ ಗಳಿಸಲಿದ್ದೇವೆ ಎನ್ನುತ್ತಾರೆ.
ಬಿಜೆಪಿ ಎಲ್ಲಾ ಕ್ಷೇತ್ರಗಳಲ್ಲಿಯೂ ಜಯ ಗಳಿಸುವ ವಿಶ್ವಾಸದಲ್ಲಿದೆ. ಪ್ರಧಾನಮಂತ್ರಿ ನರೇಂದ್ರಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಈ ಭಾಗಗಳಲ್ಲಿ ಅಬ್ಬರದ ಪ್ರಚಾರ ನಡೆಸಿದ್ದು, 10 ರಿಂದ 12 ಸ್ಥಾನಗಳಲ್ಲಿ ಗೆಲುವು ವಿಶ್ವಾಸದಲ್ಲಿದೆ. ಜೆಡಿಎಸ್ ಕಾರವಾರದಲ್ಲಿ ಮಾತ್ರ ಗೆಲ್ಲುವ ಸಾಧ್ಯತೆ ಇದೆ.
ಸಚಿವ ಬಿ. ರಮಾನಾಥ್ ರೈ ಸ್ಪರ್ಧಿಸಿರುವ ಬಂಟ್ವಾಳ ಕ್ಷೇತ್ರದಲ್ಲಿ ಶೇ.80ಕ್ಕಿಂತಲೂ ಹೆಚ್ಚಿನ ಮತದಾನವಾಗಿದೆ. ಇದು ಕಾಂಗ್ರೆಸ್ ನಲ್ಲಿ ಆತಂಕಕ್ಕೆ ಕಾರಣವಾಗಿದೆ. ಆರ್ ಎಸ್ ಎಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆ, ಕಲ್ಲಡ್ಕ ಶಾಲೆಗೆ ಮಧ್ಯಾಹ್ನ ಬಿಸಿಯೂಟ ಯೋಜನೆಗೆ ಅನುದಾನ ಸ್ಥಗಿತ ಮತದಾರರ ಮೇಲೆ ಪ್ರಭಾವ ಬೀರಿದೆ.
ಮಂಗಳೂರು ನಗರದಲ್ಲಿನ ಮತದಾನ ಕಡಿಮೆ ಪ್ರಮಾಣದಲ್ಲಿ ಆಗಿದೆ. ಉತ್ತಮ ರೀತಿಯಲ್ಲಿ ಆಗಿದೆ ಎಂದು ಕಾಂಗ್ರೆಸ್ ನಾಯಕರು ಹೇಳುತ್ತಾರೆ.
ಆದಾಗ್ಯೂ, ಉಡುಪಿಯಲ್ಲಿ ಕೆಲ ಕ್ಯಾಥೋಲಿಕ್ ಸಮುದಾಯದ ಪ್ರಾಬಲ್ಯ ಹೊಂದಿರುವ ಕಡೆಗಳಲ್ಲಿ ಕಡಿಮೆ ಪ್ರಮಾಣದಲ್ಲಿ ಮತದಾನವಾಗಿರುವುದು ಕಾಂಗ್ರೆಸ್ ನಲ್ಲಿ ಭೀತಿ ಮೂಡಿಸಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ 3-2 ಅಂತರದಲ್ಲಿ ಹೋರಾಟ ನಡೆಸಲಿವೆ. ಮೂರು ಕ್ಷೇತ್ರಗಳಲ್ಲಿಯೂ ಸಮಬಲದ ಹೋರಾಟ ನಡೆಸುವುದಾಗಿ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರು ಹೇಳಿದ್ದಾರೆ.