ಹೈ ಕಮಾಂಡ್ ನಿರ್ಧಾರಕ್ಕೆ ತಲೆ ಬಾಗುತ್ತೇನೆ: ಕೇಂದ್ರ ಮಾಜಿ ಸಚಿವ ಕೆ.ಹೆಚ್. ಮುನಿಯಪ್ಪ

ಪಕ್ಷ ಬಹುಮತದ ಮೂಲಕ ಅಧಿಕಾರಕ್ಕೆ ಬಂದಿದ್ದೇ ಆದರೆ, ದಲಿತ ನಾಯಕನನ್ನು ಉಪ ಮುಖ್ಯಮಂತ್ರಿಯಾಗಿ ಮಾಡಲು ನಿರ್ಧಾರ ಕೈಗೊಂಡು, ಪಕ್ಷದ ಹೈ ಕಮಾಂಡ್ ನನ್ನನ್ನು ಆ ಸ್ಥಾನದಲ್ಲಿ ನಿಲ್ಲಿಸಿದ್ದೇ ಆದರೆ, ಹೈಕಮಾಂಡ್ ನಿರ್ಧಾರಕ್ಕೆ ತಲೆ ಬಾಗುತ್ತೇನೆಂದು...
ಕೇಂದ್ರದ ಮಾಜಿ ಸಚಿವ ಕೆ.ಹೆಚ್.ಮುನಿಯಪ್ಪ
ಕೇಂದ್ರದ ಮಾಜಿ ಸಚಿವ ಕೆ.ಹೆಚ್.ಮುನಿಯಪ್ಪ
Updated on: 
ಕೋಲಾರ: ಪಕ್ಷ ಬಹುಮತದ ಮೂಲಕ ಅಧಿಕಾರಕ್ಕೆ ಬಂದಿದ್ದೇ ಆದರೆ, ದಲಿತ ನಾಯಕನನ್ನು ಉಪ ಮುಖ್ಯಮಂತ್ರಿಯಾಗಿ ಮಾಡಲು ನಿರ್ಧಾರ ಕೈಗೊಂಡು, ಪಕ್ಷದ ಹೈ ಕಮಾಂಡ್ ನನ್ನನ್ನು ಆ ಸ್ಥಾನದಲ್ಲಿ ನಿಲ್ಲಿಸಿದ್ದೇ ಆದರೆ, ಹೈಕಮಾಂಡ್ ನಿರ್ಧಾರಕ್ಕೆ ತಲೆ ಬಾಗುತ್ತೇನೆಂದು 7 ಬಾರಿ ಸಂಸದರಾಗಿದ್ದ ಹಾಗೂ ಕೇಂದ್ರದ ಮಾಜಿ ಸಚಿವ ಕೆ.ಹೆಚ್.ಮುನಿಯಪ್ಪ ಅವರು ಭಾನುವಾರ ಹೇಳಿದ್ದಾರೆ.  
ದೇಶದಾದ್ಯಂತ ತೀವ್ರ ಕುತೂಹಲ ಕೆರಳಿಸಿದ್ದ ರಾಜ್ಯ ವಿಧಾನಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಶನಿವಾರ ಮುಕ್ತಾಯಗೊಂಡಿತ್ತು. ಮತದಾನ ಪೂರ್ಣಗೊಂಡ ಹಿನ್ನಲೆಯಲ್ಲಿ ಹಲವು ಮಾಧ್ಯಮಗಳು ಚುನಾವಣೋತ್ತರ ಸಮೀಕ್ಷೆಗಳು ನಡೆಸಿದ್ದು, ಕುತೂಹಲಕಾರಿ ಫಲಿತಾಂಶಗಳ ಕುರಿತು ಸುದ್ದಿ ಪ್ರಕಟಿಸುತ್ತಿವೆ. ಚುನಾವಣೋತ್ತರ ಫಲಿತಾಂಶಗಳು ಕುರಿತು ರಾಜ್ಯದಲ್ಲಿ ಒಂದೆಡೆ ಚರ್ಚೆ ನಡೆಯುತ್ತಿದ್ದರೆ, ಮತ್ತೊಂದೆಡೆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬಂದಿದ್ದೇ ಆದರೆ, ಉಪ ಮುಖ್ಯಮಂತ್ರಿ ಯಾರಾಗುತ್ತಾರೆಂಬುದರ ಕುರಿತೂ ಕೂಡ ಚರ್ಚೆಗಳು ಆರಂಭವಾಗಿವೆ. 
ದಲಿತರೊಬ್ಬರು ಮುಖ್ಯಮಂತ್ರಿಯಾಗುವುದಾದರೆ ತಮಗೆ ಅಡ್ಡಿಯಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿಕೆ ನೀಡಿರುವ ಹಿನ್ನಲೆಯಲ್ಲಿ ಚರ್ಚೆಗೆ ಕಾವು ದೊರೆತಂತಾಗಿದೆ. 
ಸಿದ್ದರಾಮಯ್ಯ ಅವರ ಹೇಳಿಕೆ ಬೆನ್ನಲ್ಲೇ ಕಾಂಗ್ರೆಸ್ ಹಿರಿಯ ದಲಿತ ಮುಖಂಡರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ಪರಮೇಶ್ವರ್ ಕೂಡ ಈ ವಿಚಾರದಲ್ಲಿ ಪ್ರತಿಕ್ರಿಯೆ ನೀಡಿದ್ದು, ಚರ್ಚೆಗೆ ಮತ್ತಷ್ಟು ಇಂಬು ನೀಡಿದಂತಾಗಿದೆ.
ದಲಿತ ಎಂಬ ಕಾರಣಕ್ಕೆ ನನಗೆ ಮುಖ್ಯಮಂತ್ರಿ ಪದವಿ ಕೊಡುವುದು ಬೇಡ. ಎಂದೂ ದಲಿತ ಎಂದು ಮುಖ್ಯಮಂತ್ರಿ ಹುದ್ದೆಗೆ ಅರ್ಜಿ ಹಾಕಿಲ್ಲ. ಆ ಮನಸ್ಸೂ ನನಗಿಲ್ಲ. ಹಿರಿಯ ಕಾಂಗ್ರೆಸ್ಸಿಗನೆಂದು ಮುಖ್ಯಮಂತ್ರಿ ಪದವಿ ಕೊಟ್ಟರೆ ಕೊಡಲಿ. ಹೆಚ್ಚೇನೂ ಹೇಳಲಾರೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಯವರು ಹೇಳಿದ್ದಾರೆ. 
ದಲಿತ ಮುಖ್ಯಂತ್ರಿಗೆ ನನ್ನ ಬೆಂಬ ಎಂದು ಸಿದ್ದರಾಮಯ್ಯ ಅವರು ಹೇಳಿಕೆ ನೀಡಿದ್ದರೆ ಸ್ವಾಗತಿಸುವೆ. ಆದರೆ, ಮುಖ್ಯಮಂತ್ರಿ ಯಾರೆಂದು ನಿರ್ಧರಿಸುವುದು ಕಾಂಗ್ರೆಸ್ ಶಾಸಕಾಂಗ ಪಕ್ಷ ಹಾಗೂ ಹೈ ಕಮಾಂಡ್. ಇದು ಕಾಂಗ್ರೆಸ್ ಪಕ್ಷದ ನಿಯಮ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರು ತಿಳಿಸಿದ್ದಾರೆ, 
ಕೇಂದ್ರ ಹಿರಿಯ ನಾಯಕ ಮುನಿಯಪ್ಪ ಅವರು ಮಾತನಾಡಿ, ಹೈಕಮಾಂಡ್ ನಿರ್ಧಾರಕ್ಕೆ ತಲೆ ಬಾಗುತ್ತೇನೆ. ಪಕ್ಷದ ವಿವಿಧ ಹುದ್ದೆಗಳಲ್ಲಿ ನಾನು ಸೇವೆ ಸಲ್ಲಿಸಿದ್ದೇನೆ. ಕೇಂದ್ರ ಸಚಿವನಾಗಿ ಕಾರ್ಯನಿರ್ವಹಿಸುವ ಅವಕಾಶವನ್ನೂ ಪಕ್ಷ ನನಗೆ ನೀಡಿದೆ ಎಂದು ಹೇಳಿದ್ದಾರೆ. 
7 ಬಾರಿ ಲೋಕಸಭಾ ಕ್ಷೇತ್ರ ಚುನಾವಣೆಯಲ್ಲಿ ಸತತ 7 ಬಾರಿ ಗೆಲವು ಸಾಧಿಸಿದ್ದೆ. ಪಕ್ಷದ ಅಭ್ಯರ್ಥಿಯಾಗಿಯೂ ಕಾರ್ಯನಿರ್ವಹಿಸಿದ್ದೇನೆ. ಉನ್ನತ ಸ್ಥಾನಕ್ಕೆ ಯಾರನ್ನು ನೇಮಿಸಬೇಕೆಂಬ ನಿರ್ಧಾರವನ್ನು ಪಕ್ಷದ ಹೈಕಮಾಂಡ್ ನಿರ್ಧರಿಸಲಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com