ಬಿಜೆಪಿಗೆ ಅಭಿನಂದನೆ ಸಲ್ಲಿಸಿದ ಯೋಗಿ ಆದಿತ್ಯನಾಥ್

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿರುವುದಕ್ಕೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಭಿನಂದನೆ ಸಲ್ಲಿಸಿದ್ದಾರೆ.
ಯೋಗಿ ಆದಿತ್ಯನಾಥ್
ಯೋಗಿ ಆದಿತ್ಯನಾಥ್
Updated on

ಲಕ್ನೋ : ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿರುವುದಕ್ಕೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್  ಅಭಿನಂದನೆ ಸಲ್ಲಿಸಿದ್ದಾರೆ.

ಬಿಜೆಪಿಗೆ ಬಹುಮತ ದೊರಕಿಸಿರುವ ಕರ್ನಾಟಕದ ಜನತೆ ಹಾಗೂ ಪಕ್ಷದ ಕಾರ್ಯಕರ್ತರನ್ನು ಅಭಿನಂದಿಸುವುದಾಗಿ ಅವರು ಹೇಳಿದ್ದಾರೆ.

ಪ್ರಧಾನಮಂತ್ರಿ ನರೇಂದ್ರಮೋದಿ  ಅವರ  ಅಭಿವೃದ್ದಿಪರ ಸಿದ್ದಾಂತದಿಂದ ಆಕರ್ಷಿತಗೊಂಡು ಜನತೆ ಬಿಜೆಪಿಗೆ ಬಹುಮತ ನೀಡಿದ್ದಾರೆ. ಈ ಮೂಲಕ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ದಕ್ಷಿಣದಲ್ಲಿ ಪ್ರಾಬಲ್ಯ ಸಾಧಿಸಲು ನೆರವಾಗಲಿದೆ ಎಂದು ಹೇಳಿದ್ದಾರೆ.

ಚುನಾವಣೆಯಲ್ಲಿ ಬಿಜೆಪಿ 104, ಕಾಂಗ್ರೆಸ್ 78, ಜೆಡಿಎಸ್ 38 , ಹಾಗೂ ಪಕ್ಷೇತರರು 2 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com