ಮೇ.15 ರಂದು ಪ್ರಕಟವಾದ ರಾಜ್ಯ ವಿಧಾನಸಭಾ ಚುನಾವಣೆಯ ಫಲಿತಾಂಶದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ವಕ್ತಾರ ಎಸ್ ಶಾಂತಾರಾಮ್, ಮೈಸೂರು, ಹಾಸನ, ತುಮಕೂರು ಪ್ರದೇಶಗಳಲ್ಲಿ ಹೆಚ್ಚಿನ ಜನತೆ ಕಾಂಗ್ರೆಸ್ ವಿರುದ್ಧವಾಗಿ ಜನತಾದಳದ ಪರವಾಗಿ ಮತ ಚಲಾಯಿಸಿದ್ದಾರೆ. ರಾಜ್ಯದ ಜನತೆ ಕರ್ನಾಟಕವನ್ನು ಕಾಂಗ್ರೆಸ್ ಮುಕ್ತವನ್ನಾಗಿಸುವ ನಿಟ್ಟಿನಲ್ಲಿ ತೀರ್ಪು ನೀಡಿದ್ದಾರೆ. ಜೆಡಿಎಸ್ ನಿಂದ ಹೆಚ್ಚು ಹಾನಿಯಾಗಿರುವುದು ಕಾಂಗ್ರೆಸ್ ಗೇ ಹೊರತು ಬಿಜೆಪಿಗೆ ಅಲ್ಲ ಎಂದು ಹೇಳಿದ್ದಾರೆ.