ಕರ್ನಾಟಕ ವಿಧಾನಸಭೆ ಚುನಾವಣೆ: ಮಂಡ್ಯ ಕ್ಲೀನ್ ಸ್ವೀಪ್ ಮಾಡಿದ ಜೆಡಿಎಸ್

ಮಂಡ್ಯ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಭರ್ಜರಿ ಗೆಲುವು ಸಾಧಿಸಿದ್ದು, ಮಂಡ್ಯದ ಎಲ್ಲ ಏಳೂ ಕ್ಷೇತ್ರಗಳಲ್ಲೂ ಭಾರಿ ಮುನ್ನಡೆ ಸಾಧಿಸಿ ಗೆಲುವು ಸಾಧಿಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಮಂಡ್ಯ: ಮಂಡ್ಯ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಭರ್ಜರಿ ಗೆಲುವು ಸಾಧಿಸಿದ್ದು, ಮಂಡ್ಯದ ಎಲ್ಲ ಏಳೂ ಕ್ಷೇತ್ರಗಳಲ್ಲೂ ಭಾರಿ ಮುನ್ನಡೆ ಸಾಧಿಸಿ ಗೆಲುವು ಸಾಧಿಸಿದ್ದಾರೆ. 
ಮಂಡ್ಯದಲ್ಲಿ ಜಾತ್ಯಾತೀತ ಜನತಾದಳ ಕ್ಲೀನ್ ಸ್ವೀಪ್ ಮಾಡಿದೆ. 7 ಕ್ಷೇತ್ರಗಳಲ್ಲಿಯೂ ಜೆಡಿಎಸ್ ಅಭ್ಯರ್ಥಿಗಳು ಜಯಗಳಿಸಿದ್ದಾರೆ. ಬಂಡಾಯವೆದ್ದು ನಾಗಮಂಗಲ ಕ್ಷೇತ್ರದಲ್ಲಿ  ಕಾಂಗ್ರೆಸ್'ನಿಂದ ಸ್ಪರ್ಧಿಸಿದ್ದ ಚೆಲುವರಾಯ ಸ್ವಾಮಿ ಸೋಲು ಅನುಭವಿಸಿದ್ದಾರೆ. ಮೇಲುಕೋಟೆಯಲ್ಲಿ ರೈತ ಸಂಘದಿಂದ ಸ್ಪರ್ಧಿಸಿದ್ದ ದರ್ಶನ್ ಪುಟ್ಟಣ್ಣಯ್ಯ ಕೂಡ ಪರಾಭವಗೊಂಡಿದ್ದಾರೆ.  
ಉಳಿದಂತೆ ಮಳ್ಳವಳ್ಳಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಅನ್ನದಾನಿ, ಮದ್ದೂರು ಕ್ಷೇತ್ರದ ತಮ್ಮಣ್ಣ, ಮೇಲುಕೋಟೆಯಲ್ಲಿ ಪುಟ್ಟರಾಜು ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಮಂಡ್ಯ ಪಟ್ಟಣದಲ್ಲೂ ಜೆಡಿಎಸ್ ಜಯಭೇರಿ ಭಾರಿಸಿದ್ದು, ಅಂಬರೀಶ್ ಅನುಪಸ್ಥಿತಿ ಕಾಂಗ್ರೆಸ್ ಪಕ್ಷಕ್ಕೆ ತೀವ್ರ ಹಿನ್ನಡೆಯನ್ನುಂಟು ಮಾಡಿದೆ. ಮಂಡ್ಯ ಪಟ್ಟಣ ಕ್ಷೇತ್ರದಲ್ಲಿ ಜೆಡಿಎಸ್ ಎಂ ಶ್ರೀನಿವಾಸ್ ಅವರು ಜಯಭೇರಿ ಭಾರಿಸಿದ್ದು, ಕಾಂಗ್ರೆಸ್ ಪಕ್ಷದ ರವೀಂದ್ರ ಗಣಿಗ ಸೋಲು ಕಂಡಿದ್ದಾರೆ.
ಇನ್ನು ಶ್ರೀರಂಗ ಪಟ್ಟಣದಲ್ಲಿ ರವೀಂದ್ರ ಶ್ರೀಕಂಠಯ್ಯ, ನಾಗಮಂಗಲದಲ್ಲಿ ಸುರೇಶ್ ಗೌಡ ಜಯಭೇರಿ ಭಾರಿಸಿದ್ದಾರೆ. ಇಲ್ಲಿ ಮಾಜಿ ಸಚಿವ ಹಾಗೂ  ಇತ್ತೀಚೆಗೆ ಕಾಂಗ್ರೆಸ್ ಸೇರಿದ್ದಜೆಡಿಎಸ್ ರೆಬೆಲ್ ಶಾಸಕ ಚೆಲುವರಾಯ ಸ್ವಾಮಿ ಅವರಿಗೆ ತೀವ್ರ ಮುಖಭಂಗವಾಗಿದೆ. ಅಂತೆಯೇ ಕೆಆರ್ ಪೇಟೆಯಲ್ಲೂ ಜೆಡಿಎಸ್ ಅಭ್ಯರ್ಥಿ ನಾರಾಯಣಗೌಡ ಸೋಲು ಕಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com