ಹಾಲಿ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಪ್ರತಿಷ್ಟಿತ ಕ್ಷೇತ್ರಗಳಲ್ಲಿ ಪ್ರಮುಖವಾಗಿದ್ದ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿಎಂ ಸಿದ್ದರಾಮಯ್ಯ ಸೋಲು ಕಂಡಿದ್ದಾರೆ. ಚುನಾವಣೆಗೂ ಮೊದಲು ಸಿಎಂ ಸಿದ್ದರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸ್ಪರ್ಧಿಸುವುದು ಬೇಡ..ಸೋಲಾಗಬಹುದು ಎಂದು ಕಾಂಗ್ರೆಸ್ ಪಕ್ಷದ ಆಂತರಿಕ ಸಮೀಕ್ಷೆಗಳು ಹೇಳಿದ್ದವು. ಇದೇ ಕಾರಣಕ್ಕೆ ಸಿಎಂ ಸಿದ್ದರಾಮಯ್ಯ ಬಾದಾಮಿ ಕ್ಷೇತ್ರವನ್ನು ತಮ್ಮ ಎರಡನೇ ಕ್ಷೇತ್ರವಾಗಿ ಆಯ್ಕೆ ಮಾಡಿಕೊಂಡಿದ್ದರು. ಇದೀಗ ತವರು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತಿದ್ದಾರೆ.