ಚುನಾವಣಾ ಫಲಿತಾಂಶ: ಅಶೋಕ ಹೋಟೆಲ್ ಗೆ ಧಾವಿಸಿದ ಕುಮಾರಸ್ವಾಮಿ, ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿ ಕುರಿತು ಚರ್ಚೆ

ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು ಸರಳ ಬಹುಮತ ಪಡೆಯುವಲ್ಲಿ ಯಾವ ರಾಜಕೀಯ ಪಕ್ಷಗಳೂ ಸಫಲವಾಗಿಲ್ಲ.
ಅಶೋಕ ಹೋಟೆಲ್ ಗೆ ಧಾವಿಸಿದ ಕುಮಾರಸ್ವಾಮಿ
ಅಶೋಕ ಹೋಟೆಲ್ ಗೆ ಧಾವಿಸಿದ ಕುಮಾರಸ್ವಾಮಿ
Updated on: 
ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು ಸರಳ ಬಹುಮತ ಪಡೆಯುವಲ್ಲಿ ಯಾವ ರಾಜಕೀಯ ಪಕ್ಷಗಳೂ ಸಫಲವಾಗಿಲ್ಲ. 
ಇದೇ ವೇಳೆ ದಕ್ಷಿಣ ಭಾರತದಲ್ಲಿ ಬಿಜೆಪಿ ಅಧಿಕಾರಕ್ಕೇರುವುದನ್ನು ತಡೆಯುವ ಸಲುವಾಗಿ ಕಾಂಗ್ರೆಸ್, ಮೂರನೇ ಸ್ಥಾನದಲ್ಲಿರುವ ಜೆಡಿಎಸ್ ಗೆ ಬೆಂಬಲ ನೀಡಲು ಮುಂದಾಗಿದೆ.ಎರಡೂ ಪಕ್ಷದ ನಾಯಕರು ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ.
ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಬೆಂಗಳೂರಿನ ಅಶೋಕ ಹೋಟೆಲ್ ನಲ್ಲಿ ಸಭೆ ಸೇರಿದ್ದಾರೆ. ಸರ್ಕಾರ ರಚನೆ ಸಂಬಂಧ ಮಾತುಕತೆ ನಡೆಸಿದ್ದಾರೆ.  ಕುಮಾರಸ್ವಾಮಿ, ಎಚ್‌.ಡಿ.ದೇವೇಗೌಡ, ಸಿದ್ದರಾಮಯ್ಯ, ಸೇರಿದಂತೆ ಕಾಂಗ್ರೆಸ್ ಮತ್ತು ಜೆಡಿಎಸ್‌ನ ಹಿರಿಯ ಮುಖಂಡರು ಮಾತುಕತೆಯಲ್ಲಿ ಭಾಗವಹಿಸಿದ್ದಾರೆ.
ಇದಕ್ಕೂ ಮುನ್ನ ಚುನಾವಣೆಯಲ್ಲಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ ಬಿಜೆಪಿಗೆ ಸರ್ಕಾರ ರಚನೆಗೆ ಅವಕಾಶ ನಿಡಬೇಕು, ಸದನದಲ್ಲಿ ನಾವು ವಿಶ್ವಾಸಮತ ಸಾಬೀತು ಪಡಿಸುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ರಾಜ್ಯಪಾಲರಿಗೆ ಮನವಿ ಮಾಡಿದ್ದರು.
ಮೇ 12ರಂ ಚುನಾವಣೆಯ ಮತ ಎಣಿಕೆ ಇಂದು ನಡೆದಿದ್ದು ಬಿಜೆಪಿ 103, ಕಾಂಗ್ರೆಸ್ 78 , ಜೆಡಿಎಸ್ 38 ಹಾಗೂ ಇತರರು 2 ಸ್ಥಾನಗಳಲ್ಲಿ ಜಯ ಸಾಧಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com