ಗೆಲುವಿಗಾಗಿ ಪಾರ್ಥನೆ; ದೇವಾಲಯಗಳಲ್ಲಿ ರಾಜಕೀಯ ಮುಖಂಡರಿಂದ ವಿಶೇಷ ಪೂಜೆ

Published On :
ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣಾ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ಇತ್ತ ರಾಜಕೀಯ ಮುಖಂಡರು ತಮ್ಮ ಗೆಲುವಿಗಾಗಿ ದೇವರ ಮೊರೆ ಹೋಗುತ್ತಿದ್ದಾರೆ.
ಅತ್ತ ಹೈವೋಲ್ಟೇಜ್ ಕ್ಷೇತ್ರ ಚಾಮುಂಡೇಶ್ವರಿಯಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸ್ಪರ್ಧಿಸಿರುವ ಜಿಟಿ ದೇವೇಗೌಡ ಅವರು, ಕುಟುಂಬ ಸಮೇತರಾಗಿ ಚಾಮುಂಡಿ ಬೆಟ್ಟಕ್ಕೆ ತೆರಳು ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಕೆ ಮಾಡಿದರು. ಕುಟುಂಬ ಸಮೇತರಾಗಿ ಆಗಮಿಸಿದ್ದ ಅವರು, ಈ ವೇಳೆ ಕ್ಷೇತ್ರದಲ್ಲಿ ತಮ್ಮದೇ ಗೆಲುವು ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇನ್ನು ಇತ್ತ ಸಿಂಗಾಪುರಕ್ಕೆ ತೆರಳಿದ್ದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಅವರು, ಕರ್ನಾಟಕಕ್ಕೆ ವಾಪಸ್ ಆಗಿದ್ದಾರೆ.
ನಾಗಮಂಗಲ ತಾಲ್ಲೂಕಿನಲ್ಲಿರುವ ಆದಿಚುಂಚನಗಿರಿ ಮಠದ ಕಾಲಭೈರವೇಶ್ವರ ದೇಗುಲಕ್ಕೆ ದಂಪತಿ ಸಮೇತ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇಂದು ಅಮವಾಸ್ಯೆ ಆಗಿರುವುದರಿಂದ ದೇವಾಲಯಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಇಂದು ಬೆಳಗ್ಗೆ ನಾಗಮಂಗಲದಲ್ಲಿರುವ ಶ್ರೀ ಆದಿ ಚುಂಚನಗಿರಿ ದೇವಾಲಯಕ್ಕೆ ಪತ್ನಿ ಅನಿತಾ ಕುಮಾರ ಸ್ವಾಮಿ ಅವರೊಂದಿಗೆ ತೆರಳಿ ವಿಶೇಷ ಪೂಜೆ ಸಲ್ಲಿಕೆ ಮಾಡಿದರು. ಈ ವೇಳೆ ಚಿತ್ರನಟಿ ಅಮೂಲ್ಯ ಮತ್ತು ಅವರ ಪತಿ ಪೂಜೆಯಲ್ಲಿ ಪಾಲ್ಗೊಂಡಿದ್ದರು. ಇತ್ತೀಚೆಗಷ್ಟೇ ಅಮೂಲ್ಯ ಮತ್ತು ಅವರ ಪತಿ, ಅವರ ಮಾವ ಜೆಡಿಎಸ್ಗೆ ಸೇರ್ಪಡೆಯಾಗಿದ್ದರು.
ಈ ಹಿಂದೆ ದೇವೇಗೌಡ, ಕುಮಾರಸ್ವಾಮಿ ಹಾಗೂ ರೇವಣ್ಣ ಕುಟುಂಬ ಮೂರು ಅಮವಾಸ್ಯೆ ಪೂಜೆಯನ್ನ ಕಾಲಭೈರವನಿಗೆ ಸಲ್ಲಿಸಿತ್ತು.
ಇನ್ನು ಬಳ್ಳಾರಿಯಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ಅವರು ತಮ್ಮ ನಿವಾಸದಲ್ಲಿ ವಿಶೇಷ ಪೂಜೆ ನೆರವೇರಿಸದರು. ಈ ವೇಳೆ ಗೋಪೂಜೆ ನೆರವೇರಿಸಿದ ಶ್ರೀರಾಮುಲು ಗೆಲುವಿಗಾಗಿ ಪ್ರಾರ್ಥನೆ ಮಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಬೆಂಗಳೂರುCongressಕಾಂಗ್ರೆಸ್BengaluruJDSbjpಬಿಜೆಪಿಜೆಡಿಎಸ್Karnataka Assembly Electionಕರ್ನಾಟಕ ವಿಧಾನಸಭೆ ಚುನಾವಣೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


