ನವದೆಹಲಿ: ದೇಶಾದ್ಯಂತ ತೀವ್ರ ಕುತೂಹಲ ಮೂಡಿಸಿದ್ದ ಕರ್ನಾಟಕ ವಿಧಾನಸಭೆ ಚುನಾವಣೆಯ ಫಲಿತಾಂಶ ಮಂಗಳವಾರ ಪ್ರಕಟವಾಗಿದ್ದು, ಬಿಜೆಪಿ ಸ್ಪಷ್ಟ ಬಹುಮತ ಪಡೆಯದಿದ್ದರೂ ಅತಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿದೆ.
ಈ ಬಗ್ಗೆ ಎಎನ್ಐಗೆ ಪ್ರತಿಕ್ರಿಯಿಸಿದ ಬಿಜೆಪಿ ನಾಯಕ ರಮಾ್ ಮಾಧವ್ ಅವರು, ಕರ್ನಾಟಕ ಚುನಾವಣೆಯಲ್ಲಿ ಬಿಜೆಪಿ ಗೆಲುವಿಗೆ ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್ ಎಸ್ಎಸ್)ದ ಕಾರ್ಯಕರ್ತರು ಆಗಾಧವಾಗಿ ಸಹಾಯ ಮಾಡಿದ್ದಾರೆ.
ಕರ್ನಾಟಕದಲ್ಲಿ ಬಿಜೆಪಿ ಗೆಲುವಿನ ಕ್ರೆಡಿಟ್ ಅನ್ನು ರಾಜ್ಯ ನಾಯಕತ್ವಕ್ಕ ವಿಶೇಷವಾಗಿ ಆರ್ ಎಸ್ಎಸ್ ಕಾರ್ಯಕರ್ತರಿಗೆ ಹೋಗಬೇಕು ಎಂದಿದ್ದಾರೆ.
ಚುನಾವಣಾ ಆಯೋಗದ ಮಾಹಿತಿ ಪ್ರಕಾರ, ಬಿಜೆಪಿ 104 ಸ್ಥಾನಗಳಲ್ಲಿ, ಕಾಂಗ್ರೆಸ್ 77 ಸ್ಥಾನಗಳಲ್ಲಿ, ಜೆಡಿಎಸ್ 39 ಹಾಗೂ ಎರಡು ಕ್ಷೇತ್ರಗಳಲ್ಲಿ ಇತರರು ಗೆಲುವು ಸಾಧಿಸಿದ್ದಾರೆ.