

ಬೆಂಗಳೂರು :ಜೆಡಿಎಸ್ ಜೊತೆ ಸರ್ಕಾರ ರಚಿಸಲು ಶಾಸಕಾಂಗ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.
ಕಾಂಗ್ರೆಸ್ ಶಾಸಕಾಂಗ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಹುತೇಕ ಎಲ್ಲಾ ಶಾಸಕರು ಸಭೆಯಲ್ಲಿ ಪಾಲ್ಗೊಂಡಿದ್ದರು. ಜೆಡಿಎಸ್ ನೊಂದಿಗೆ ಮೈತ್ರಿ ಸರ್ಕಾರ ರಚಿಸಲು ಸಭೆಯಲ್ಲಿ ಒಮ್ಮತದ ನಿರ್ಧಾರ ಕೈಗೊಳ್ಳಲಾಯಿತು ಎಂದು ತಿಳಿಸಿದರು.
ಕೆಲವರು ಪೂರ್ವ ನಿಗದಿತ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಅನುಮತಿ ಪಡೆದುಕೊಂಡಿದ್ದಾರೆ ಎಂದು ತಿಳಿಸಿದ ಅವರು, ಕಾಂಗ್ರೆಸ್ಸಿನ ಎಲ್ಲಾ ಚುನಾಯಿತ ಶಾಸಕರು ನಾಯಕರ ಸಂಪರ್ಕದಲ್ಲಿದ್ದಾರೆ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ನಡೆದ ಶಾಸಕಾಂಗ ಸಭೆಯಲ್ಲಿ ಕೆಪಿಪಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್, ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಮತ್ತಿತರರು ಪಾಲ್ಗೊಂಡಿದ್ದರು.