ಕಾಂಗ್ರೆಸ್ , ಜೆಡಿಎಸ್ ಶಾಸಕರ ಜೊತೆ ಬಿಜೆಪಿ ಸಂಪರ್ಕ - ಕೆ. ಎಸ್. ಈಶ್ವರಪ್ಪ

ಈ ಬಾರಿಯ ಚುನಾವಣೆಯಲ್ಲಿ ಸರ್ಕಾರ ರಚನೆಗೆ ಅಗತ್ಯವಿರುವಷ್ಟು ಸಂಖ್ಯಾ ಬಲ ಹೊಂದಿರದ ಬಿಜೆಪಿ ಸರ್ಕಾರ ರಚಿಸಲು ಇನ್ನಿಲ್ಲದಂತಹ ಕಸರತ್ತು ನಡೆಸುತ್ತಿದೆ.
ಕೆ.ಎಸ್. ಈಶ್ವರಪ್ಪ
ಕೆ.ಎಸ್. ಈಶ್ವರಪ್ಪ

ಬೆಂಗಳೂರು : ಈ  ಬಾರಿಯ ಚುನಾವಣೆಯಲ್ಲಿ ಸರ್ಕಾರ ರಚನೆಗೆ ಅಗತ್ಯವಿರುವಷ್ಟು ಸಂಖ್ಯಾ ಬಲ ಹೊಂದಿರದ ಬಿಜೆಪಿ  ಸರ್ಕಾರ ರಚಿಸಲು ಇನ್ನಿಲ್ಲದಂತಹ ಕಸರತ್ತು ನಡೆಸುತ್ತಿದೆ.

 ಈ ಮಧ್ಯೆ ಕೆಲ ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರು ಬಿಜೆಪಿ ಸಂಪರ್ಕದಲ್ಲಿದ್ದು, ಬಹುಮತ ಸಾಬೀತುಪಡಿಸುವ ವಿಶ್ವಾಸ ಇರುವುದಾಗಿ ಬಿಜೆಪಿ ಹಿರಿಯ ಮುಖಂಡ ಕೆ. ಎಸ್. ಈಶ್ವರಪ್ಪ ಹೇಳಿದ್ದಾರೆ.ಕರ್ನಾಟಕದಲ್ಲಿ ಬಿಜೆಪಿ ಸರ್ಕಾರವೇ ಅಸ್ವಿತ್ವಕ್ಕೆ ಬರಲಿದೆ ಎಂದು ಕೆ. ಎಸ್. ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬಿಜೆಪಿಗೆ ಬೆಂಬಲ ನೀಡಿದ್ದರೆ ತಮ್ಮಗೆ ಸಚಿವ ಸ್ಥಾನದ ಆಮಿಷವೊಡಲಾಗಿದೆ ಎಂದು ಕುಷ್ಠಗಿ ಕ್ಷೇತ್ರದ ಶಾಸಕ ಅಮರೇಗೌಡ ಲಿಂಗನಗೌಡ ಪಾಟೀಲ್  ಬೈಯ್ಯಾಪುರ ಆರೋಪಿಸಿದ್ದು, ಅವರ ಆಮಿಷವನ್ನು ತಿರಸ್ಕರಿಸಿರುವುದಾಗಿ ತಿಳಿಸಿದ್ದಾರೆ.

ಕಾಂಗ್ರೆಸ್ ಜೊತೆ ಮೈತ್ರಿ ಸರ್ಕಾರಕ್ಕೆ ಒಪ್ಪಿಕೊಂಡಿರುವ ಜೆಡಿಎಸ್ ನ ಶಾಸಕಾಂಗ ಸಭೆ ಇಂದು ನಡೆಯಲಿದ್ದು, ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರದ ರೂಪುರೇಷೆ ಸಂಬಂಧ ಚರ್ಚೆ ನಡೆಯಲಿದೆ ಎನ್ನಲಾಗಿದೆ.




ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com