ರಾಜಕೀಯ

ಬಿಜೆಪಿಯಿಂದ ಜೆಡಿಎಸ್ ಶಾಸಕರಿಗೆ 100 ಕೋಟಿ ರೂ., ಸಚಿವ ಸ್ಥಾನದ ಆಫರ್: ಕುಮಾರಸ್ವಾಮಿ ಆರೋಪ

ಬಿಜೆಪಿಯಿಂದ ಜೆಡಿಎಸ್ ಶಾಸಕರಿಗೆ 100 ಕೋಟಿ ರೂ., ಸಚಿವ ಸ್ಥಾನದ ಆಫರ್: ಕುಮಾರಸ್ವಾಮಿ ಆರೋಪ
ಎಚ್ ಡಿ ಕುಮಾರಸ್ವಾಮಿ
Published On :
ಬೆಂಗಳೂರು: ಜಾತ್ಯಾತೀತ ಜನತಾದಳ(ಜೆಡಿಎಸ್) ಪಕ್ಷದ ಶಾಸಕಾಂಗ ನಾಯಕನಾಗಿ ಜೆಡಿಎಸ್ ರಾಷ್ಟ್ರಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ಅವರು ಆಯ್ಕೆಯಾಗಿದ್ದಾರೆ. 
ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾದ ನಂತರ ಮಾತನಾಡಿದ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕುಮಾರಸ್ವಾಮಿ ಅವರು, ಜೆಡಿಎಸ್ ಗೆ ಬೆಂಬಲ ನೀಡಿರುವ ಕಾಂಗ್ರೆಸ್ ಗೆ ನಾನು ಧನ್ಯವಾದ ಅರ್ಪಿಸುತ್ತೇನೆ. ನಾವು ಅಧಿಕಾರದ ಆಸೆಯಿಂದ ಕಾಂಗ್ರೆಸ್ ನಿರ್ಧಾರವನ್ನು ಒಪ್ಪಿಕೊಂಡಿಲ್ಲ. ರಾಜ್ಯದ ಅಭಿವೃದ್ಧಿಗಾಗಿ ನಾನು ಸರ್ಕಾರ ರಚನೆಗೆ ಮುಂದಾಗಿದ್ದೇನೆ ಎಂದರು.
ಚುನಾವಣೆಯಲ್ಲಿ ಬಿಜೆಪಿಗೆ 104 ಸ್ಥಾನ ಬಂದಿರುವುದು ಅವರ ಶ್ರಮದಿದ್ದಲ್ಲ ಅಥವಾ ಪ್ರಧಾನಿ ನರೇಂದ್ರ ಮೋದಿ ಅವು ಇಮೇಜ್ ನಿಂದ ಸಹ ಬಂದಿದ್ದಲ್ಲ. ಕೆಲವರು ಜೆಡಿಎಸ್ ಅನ್ನು ಮುಗಿಸಲು ಹೋಗಿ ಬಿಜೆಪಿಗೆ ಮತ ಹಾಕಿದ್ದಾರೆ. ಇಲ್ಲವಾಗಿದ್ದರೆ ಬಿಜೆಪಿ 80 ಸ್ಥಾನವನ್ನು ಮೀರುತ್ತಿರಲ್ಲಿಲ್ಲ ಎಂದು ಹೇಳಿದ್ದಾರೆ. 
ಇದೇ ವೇಳೆ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಕುಮಾರಸ್ವಾಮಿ ಅವರು, ನರೇಂದ್ರ ಮೋದಿ ಅವರು ಗೌರವಾನ್ವಿತ ಪ್ರಧಾನಿಯಾಗಿದ್ದರು. ಯಾವುದೇ ಕಾರಣಕ್ಕೂ ಬೇರೆಯವರಿಗೆ ಸರ್ಕಾಕ ನಡೆಸಲು ಅವಕಾಶ ನೀಡುವುದಿಲ್ಲ ಎಂದು ಹೇಳುವ ಮೂಲಕ ತಮ್ಮ ಅಧಿಕಾರವನ್ನು ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದರು. 
104 ಸ್ಥಾನ ಪಡೆದಿರುವ ಬಿಜೆಪಿಗೆ 9 ಸ್ಥಾನಗಳ ಕೊರತೆ ಇದೆ. ಹೀಗಿದ್ದರು ಬಿಜೆಪಿ ಹಕ್ಕು ಮಂಡನೆ ಮಾಡಿದೆ. ಕೊರತೆ ಇರುವ 9 ಶಾಸಕರನ್ನು ತಮ್ಮತ್ತ ಸೆಳೆಯಲು ಬಿಜೆಪಿ ಕುದುರೆ ವ್ಯಾಪಾರಕ್ಕೆ ಮುಂದಾಗಿದೆ. ಇದಕ್ಕೆ ಹಣ ಎಲ್ಲಿಂದ ಬರುತ್ತದೆ. ನನ್ನ ಪಕ್ಷದ ಕೆಲ ಶಾಸಕರಿಗೆ 100 ಕೋಟಿ ರು. ಜತೆಗೆ ಕ್ಯಾಬಿನೆಟ್ ನಲ್ಲಿ ಸಚಿವ ಸ್ಥಾನ ನೀಡುವ ಆಮಿಷ ಹೂಡಿದ್ದಾರೆ. 
ನಾನು ಅಧಿಕಾರದ ಆಸೆಯಿಂದ ಮೈತ್ರಿಗೆ ಮುಂದಾಗಿಲ್ಲ. ಕಾಂಗ್ರೆಸ್ ಪಕ್ಷವೇ ನಮಗೆ ಬೆಂಬಲ ನೀಡುತ್ತಿದ್ದು ನಾನು ಮುಖ್ಯಮಂತ್ರಿಯಾಗುತ್ತಿದ್ದೇನೆ. ಆದರೆ ಜನರ ಇಚ್ಛೆಯಿಂದ ನಾನು ಮುಖ್ಯಮಂತ್ರಿಯಾಗುತ್ತಿಲ್ಲ ಎಂಬ ನೋವು ನನಗಿದೆ ಎಂದರು. 
ಕರ್ನಾಟಕ ಚುನಾವಣೆಯ ಅತಂತ್ರ ಫಲಿತಾಂಶದಿಂದಾಗಿ ರಾಜ್ಯ ರಾಜಕೀಯ ತಲ್ಲಣಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.