ನಾಳೆ ಬೆಳಗ್ಗೆ 9.30ಕ್ಕೆ ಮುಖ್ಯಮಂತ್ರಿಯಾಗಿ ಬಿಎಸ್ ವೈ ಪ್ರಮಾಣ

ರಾಜ್ಯಪಾಲ ವಜುಭಾಯಿ ವಾಲಾ ಅವರು ವಿಧಾನಸಭೆ ಚುನಾವಣೆಯಲ್ಲಿ ಅತಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿರುವ....
ಬಿಎಸ್ ಯಡಿಯೂರಪ್ಪ
ಬಿಎಸ್ ಯಡಿಯೂರಪ್ಪ
ಬೆಂಗಳೂರು: ರಾಜ್ಯಪಾಲ ವಜುಭಾಯಿ ವಾಲಾ ಅವರು ವಿಧಾನಸಭೆ ಚುನಾವಣೆಯಲ್ಲಿ ಅತಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿರುವ ಭಾರತೀಯ ಜನತಾ ಪಕ್ಷ(ಬಿಜೆಪಿ)ಕ್ಕೆ ಸರ್ಕಾರ ರಚಿಸಲು ಅಧಿಕೃತ ಆಹ್ವಾನ ನಿಡಿದ್ದಾರೆ.
ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಬಿಎಸ್ ಯಡಿಯೂರಪ್ಪ ಅವರಿಗೆ ನೂತನ ಸರ್ಕಾರ ರಚಿಸಲು ರಾಜ್ಯಪಾಲರು ಆಹ್ವಾನ ನೀಡಿದ್ದು, ಹದಿನೈದು ದಿನಗಳಲ್ಲಿ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಲು ಸೂಚಿಸಿದ್ದಾರೆ.
ಇದೇ ವೇಳೆ ದೆಹಲಿಯಲ್ಲಿ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಸುದ್ದಿಗೋಷ್ಟಿ ನಡೆಸಿ ಇದನ್ನು ಖಚಿತಪಡಿಸಿದ್ದಾರೆ.
ದೇಶದಲ್ಲೇ ಅತಿ ಹೆಚ್ಚು ರಾಷ್ಟ್ರಪತಿ ಆಳ್ವಿಕೆ ಹೇರಿದ್ದು ಕಾಂಗ್ರೆಸ್ ಎಂದು ವಿರೋಧ ಪಕ್ಷದ ವಿರುದ್ಧ ಕಿಡಿ ಕಾರಿದ ಸಚಿವರು ಬೊಮ್ಮಾಯಿ ಪ್ರಕರಣ ಉಲ್ಲೇಖಿಸಿ ತಮ್ಮ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ. 
 ಬಿಜೆಪಿ ಹಾಗೂ ಕಾಂಗ್ರೆಸ್‌-ಜೆಡಿಎಸ್‌ ನಾಯಕರು ಸರ್ಕಾರ ರಚನೆಯ ಹಕ್ಕು ಮಂಡಿಸಿದ್ದರು. ಈ ಕುರಿತು ರಾಜ್ಯಪಾಲರು ಸುಪ್ರೀಂ ಕೋರ್ಟ್ ವಕೀಲರಿಬ್ಬರ ಸಲಹೆಯನ್ನು ಪಡೆದಿದ್ದು, ಅಂತಿಮವಾಗಿ ಅತೀ ಹೆಚ್ಚು ಸ್ಥಾನ ಗಳಿಸಿದ ಪಕ್ಷಕ್ಕೆ ಅವಕಾಶ ನೀಡಿದ್ದಾರೆ.
ಇದಕ್ಕೆ ಮುನ್ನ, ಯಡಿಯೂರಪ್ಪ ಅವರು ನಾಳೆ ಬೆಳಗ್ಗೆ 9.30ಕ್ಕೆ ರಾಜಭವನದಲ್ಲಿ ಮೂರನೇ ಬಾರಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಸಂತಸದ ಕ್ಷಣದಲ್ಲಿ ಎಲ್ಲರೂ ಭಾಗಿಯಾಗಿ ಎಂದು ಬಿಜೆಪಿ ನಾಯಕ ಸುರೇಶ್ ಕುಮಾರ್ ಅವರು ಟ್ವೀಟ್ ಮಾಡಿ.ಕೇವಲ ನಾಲ್ಕು ನಿಮಿಷದಲ್ಲಿ ಡಿಲೀಟ್‌ ಮಾಡಿ ಗೊಂದಲ ಉಂಟುಮ್ನಾಡಿದ್ದರು.
ಯಡಿಯೂರಪ್ಪ ಅವರು ಇಂದು ಬೆಳಗ್ಗೆ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಬಳಿಕ ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ಭೇಟಿ ಮಾಡಿ ಸರ್ಕಾರ ರಚನೆಯ ಹಕ್ಕು ಮಂಡಿಸಿದ್ದರು. ಬಳಿಕ ಕಾಂಗ್ರೆಸ್-ಜೆಡಿಎಸ್ ನಾಯಕರು ಸಹ ಸರ್ಕಾರ ರಚನೆಯ ಹಕ್ಕು ಮಂಡಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com