ಸರ್ಕಾರ ರಚಿಸಲು ಯಡಿಯೂರಪ್ಪಗೆ ರಾಜ್ಯಪಾಲ ಆಹ್ವಾನ 'ಪ್ರಜಾಪ್ರಭುತ್ವದ ಕಗ್ಗೊಲೆ': ಕಾಂಗ್ರೆಸ್

ಸರ್ಕಾರ ರಚಿಸಲು ಬಿಜೆಪಿ ನಾಯಕ ಬಿ.ಎಸ್.ಯಡಿಯೂರಪ್ಪ ಅವರಿಗೆ ರಾಜ್ಯಪಾಲ ವಜುಭಾಯ್ ವಾಲಾ ಅವರು ಆಹ್ವಾನ ನೀಡಿರುವುದಕ್ಕೆ ಕಾಂಗ್ರೆಸ್ ತೀವ್ರವಾಗಿ ಕಿಡಿಕಾರಿದೆ...
ಬಿಜೆಪಿ ನಾಯಕ ಬಿ.ಎಸ್.ಯಡಿಯೂರಪ್ಪ
ಬಿಜೆಪಿ ನಾಯಕ ಬಿ.ಎಸ್.ಯಡಿಯೂರಪ್ಪ
ನವದೆಹಲಿ: ಸರ್ಕಾರ ರಚಿಸಲು ಬಿಜೆಪಿ ನಾಯಕ ಬಿ.ಎಸ್.ಯಡಿಯೂರಪ್ಪ ಅವರಿಗೆ ರಾಜ್ಯಪಾಲ ವಜುಭಾಯ್ ವಾಲಾ ಅವರು ಆಹ್ವಾನ ನೀಡಿರುವುದಕ್ಕೆ ಕಾಂಗ್ರೆಸ್ ತೀವ್ರವಾಗಿ ಕಿಡಿಕಾರಿದೆ. 
ರಾಜ್ಯಪಾಲ ವಜುಭಾಯ್ ವಾಲಾ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಅವರು, ಸರ್ಕಾರ ರಚಿಸಲು ಯಡಿಯೂರಪ್ಪಗೆ ರಾಜ್ಯಪಾಲ ಆಹ್ವಾನ 'ಪ್ರಜಾಪ್ರಭುತ್ವದ ಕಗ್ಗೊಲೆ'ಯಾಗಿದೆ ಎಂದು ಹೇಳಿದ್ದಾರೆ. ಅಲ್ಲದೆ, ವಜುಭಾಯ್ ವಾಲಾ ಬಿಜೆಪಿಯ ಕೈಗೊಂಬೆ ಎಂದು ಆರೋಪಿಸಿದ್ದಾರೆ. 
ಸರ್ಕಾರ ರಚನೆಗೆ ಅಗತ್ಯವಿರುವ ಸಂಖ್ಯಾಬಲವನ್ನು ಹೊಂದಿಕೊಳ್ಳಲು ರಾಜ್ಯಪಾಲರು ಯಡಿಯೂರಪ್ಪ ಅವರಿಗೆ 15 ತಿನಗಳ ಕಾಲ ಸಮಯವನ್ನು ನೀಡಿದ್ದಾರೆ. 15 ದಿನಗಳಲ್ಲಿ ಬಹುಮತ ಸಾಬೀತುಪಡಿಸುವಂತೆ ತಿಳಿಸಿದ್ದಾರೆ. ಪ್ರಸ್ತುತ ಇರುವ 104 ಸಂಖ್ಯಾಬಲವನ್ನು 111 ಮಾಡಿಕೊಳ್ಳಲು ಕಾಲಾವಕಾಶವನ್ನು ನೀಡಿದ್ದಾರೆಂದು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ತೀವ್ರವಾಗಿ ಕಿಡಿಕಾರಿದ್ದಾರೆ.
ಇದರಂತೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಶೋಕ್ ಗೆಹ್ಲೋಟ್ ಅವರು ಮಾತನಾಡಿ, ಸರ್ಕಾರ ರಚಿಸುವಂತೆ ಬಿಜೆಪಿಗೆ ರಾಜ್ಯಪಾಲರು ನೀಡಿರುವ ಆಹ್ವಾನ ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ. ಬಿಜೆಪಿ ನಾಯಕತ್ವದ ಒತ್ತಡದಿಂದಾಗಿ ರಾಜ್ಯಪಾಲರು ಈ ರೀತಿಯ ನಿರ್ಧಾರವನ್ನು ಕೈಗೊಂಡಿದ್ದಾರೆ. ಭಾರತೀಯ ಇತಿಹಾಸಕ್ಕೆ ಇದು ಕರಾಳ ದಿನವಾಗಿದೆ. ದೇಶ ನಡೆಯುತ್ತಿರುವ ಹಾದಿಯನ್ನು ನೋಡಿ ಜನರು ಕಂಗಾಲಾಗಿದ್ದಾರೆ ಎಂದು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com