ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಪದಗ್ರಹಣ: ಗಾಂಧಿ ಪ್ರತಿಮೆ ಬಳಿ ಕಾಂಗ್ರೆಸ್, ಜೆಡಿಎಸ್ ಪ್ರತಿಭಟನೆ

ರಾಜ್ಯದ 23ನೇ ಮುಖ್ಯಮಂತ್ರಿಯಾಗಿ ಬಿ.ಎಸ್.ಯಡಿಯೂರಪ್ಪ ಅವರು ಪ್ರಮಾಣವಚನ ಸ್ವೀಕಾರ ಮಾಡಿರುವ ಹಿನ್ನಲೆಯಲ್ಲಿ ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಜೆಡಿಎಸ್ ಹಾಗೂ ಕಾಂಗ್ರೆಸ್ ನಾಯಕರು...
ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಪದಗ್ರಹಣ: ಗಾಂಧಿ ಪ್ರತಿಮೆ ಬಳಿ ಕಾಂಗ್ರೆಸ್, ಜೆಡಿಎಸ್ ಪ್ರತಿಭಟನೆ
ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಪದಗ್ರಹಣ: ಗಾಂಧಿ ಪ್ರತಿಮೆ ಬಳಿ ಕಾಂಗ್ರೆಸ್, ಜೆಡಿಎಸ್ ಪ್ರತಿಭಟನೆ
Updated on
ಬೆಂಗಳೂರು: ರಾಜ್ಯದ 23ನೇ ಮುಖ್ಯಮಂತ್ರಿಯಾಗಿ ಬಿ.ಎಸ್.ಯಡಿಯೂರಪ್ಪ ಅವರು ಪ್ರಮಾಣವಚನ ಸ್ವೀಕಾರ ಮಾಡಿರುವ ಹಿನ್ನಲೆಯಲ್ಲಿ ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಜೆಡಿಎಸ್ ಹಾಗೂ ಕಾಂಗ್ರೆಸ್ ನಾಯಕರು ವಿಧಾನಸೌಧದ ಬಳಿಯಿರುವ ಗಾಂಧಿ ಪ್ರತಿಮೆ ಬಳಿ ಗುರುವಾರ ಪ್ರತಿಭಟನೆ ನಡೆಸಲು ಆರಂಭಿಸಿವೆ. 
ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ರೆಸಾರ್ಟ್ ನಲ್ಲಿ ಬಚ್ಚಿಟ್ಟಿದ್ದ ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರನ್ನು ವಿಧಾನಸೌಧದ ಬಳಿ ಕರೆತರಲಾಗುತ್ತಿದ್ದು, ಈಗಾಗಲೇ ಸಿದ್ದರಾಮಯ್ಯ, ಗುಲಾಂ ನಬಿಆಜಾದ್, ಅಶೋಕ್ ಗೆಹ್ಲೋಟ್, ಮಲ್ಲಿಕಾರ್ಜುನ ಖರ್ಗೆ, ಕೆ.ಸಿ ವೇಣುಗೋಪಾಲ್ ಅವರು ಗಾಂಧಿ ಪ್ರತಿಮೆ ಬಳಿ ಬಿಜೆಪಿ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. 
ಈ ನಡುವೆ ಜೆಡಿಎಸ್ ರಾಷ್ಟ್ರಾಧ್ಯಕ್ಷ ದೇವೇಗೌಡ ಅವರೂ ಇದೂ ಇದೀಗ ವಿಧಾನಸೌಧಕ್ಕೆ ಭೇಟಿ ನೀಡಿದ್ದು, ಪ್ರತಿಭಟನೆಗೆ ಕೈ ಜೋಡಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com