ಕಾಂಗ್ರೆಸ್ - ಜೆಡಿಎಸ್ ಪರ ವಕೀಲ ಅಭಿಶೇಕ್ ಮನು ಸಿಂಘ್ವಿ
ಕಾಂಗ್ರೆಸ್ - ಜೆಡಿಎಸ್ ಪರ ವಕೀಲ ಅಭಿಶೇಕ್ ಮನು ಸಿಂಘ್ವಿ

ವಿಧಾನಸಭೆಗೆ ಆಂಗ್ಲೋ ಇಂಡಿಯನ್ ಶಾಸಕನ ನಾಮನಿರ್ದೇಶನದ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ ಕಾಂಗ್ರೆಸ್ -ಜೆಡಿಎಸ್

ಕರ್ನಾಟಕ ವಿಧಾನಸಭೆಗೆ ಆಂಗ್ಲೋ ಇಂಡಿಯನ್ ಸದಸ್ಯರೊಬ್ಬರನ್ನು ನಾಮ ನಿರ್ದೇಶನ ಮಾಡಿರುವ ರಾಜ್ಯಪಾಲರ...
ನವದೆಹಲಿ: ಕರ್ನಾಟಕ ವಿಧಾನಸಭೆಗೆ ಆಂಗ್ಲೋ ಇಂಡಿಯನ್ ಸದಸ್ಯರೊಬ್ಬರನ್ನು ನಾಮ ನಿರ್ದೇಶನ ಮಾಡಿರುವ ರಾಜ್ಯಪಾಲರ ನಿರ್ಧಾರವನ್ನು ಪ್ರಶ್ನಿಸಿ ಕಾಂಗ್ರೆಸ್ ಮತ್ತು ಜೆಡಿಎಸ್ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿವೆ.
ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಿ.ಎಸ್. ಯಡಿಯೂರಪ್ಪ ಅವರು ಬಹುಮತ ಸಾಬೀತುಪಡಿಸುವವರೆಗೆ ಆಂಗ್ಲೋ- ಇಂಡಿಯನ್ ಸದಸ್ಯರನ್ನು ನಾಮ ನಿರ್ದೇಶನ ಮಾಡುವಂತಿಲ್ಲ ಎಂದು ಕಾಂಗ್ರೆಸ್ - ಜೆಡಿಎಸ್ ವಾದಿಸಿವೆ.
ಯಡಿಯೂರಪ್ಪ ಅವರು ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯಪಾಲ ವಜುಭಾಯಿ ವಾಲಾ ಅವರು ಆಂಗ್ಲೋ - ಇಂಡಿಯನ್ ವ್ಯಕ್ತಿಯನ್ನು ವಿಧಾನಸಭೆಗೆ ನಾಮ ನಿರ್ದೇಶನ ಮಾಡಿದ್ದಾರೆ. 
ರಾಜ್ಯಪಾಲರು ಸರ್ಕಾರ ರಚಿಸಲು ಬಿಜೆಪಿಯನ್ನು ಆಹ್ವಾನಿಸಿರುವುದರ ವಿರುದ್ಧವೂ ಕಾಂಗ್ರೆಸ್ ಮತ್ತು ಜೆಡಿಎಸ್ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು. ಇದರ ಜೊತೆಗೆ ಈ ಅರ್ಜಿಯ ವಿಚಾರಣೆ ನಡೆಸುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ. ಶುಕ್ರವಾರ ಮುಂಜಾನೆ 10.30ಕ್ಕೆ ಅರ್ಜಿಯ ವಿಚಾರಣೆಗೆ ಸಮಯ ನಿಗದಿಯಾಗಿದೆ.

Related Stories

No stories found.

Advertisement

X
Kannada Prabha
www.kannadaprabha.com