ಸರ್ಕಾರ ರಚನೆ ಕಸರತ್ತು: ಮಧ್ಯರಾತ್ರಿ ವಿಚಾರಣೆಗೆ ಸುಪ್ರೀಂ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅಸ್ತು

ಕರ್ನಾಟಕ ರಾಜ್ಯಪಾಲ ವಜುಭಾಯಿ ವಾಲಾ ಚುನಾವಣೆಯಲ್ಲಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ ಬಿಜೆಪಿಗೆ ಸರ್ಕಾರ ರಚಿಸಲು ಆಹ್ವಾನ ನಿಡಿರುವುದನ್ನು ಪ್ರಶ್ನಿಸಿ .....
ಸುಪ್ರೀಂ ನ್ಯಾಯಮೂರ್ತಿ ದೀಪಕ್ ಮಿಶ್ರಾ
ಸುಪ್ರೀಂ ನ್ಯಾಯಮೂರ್ತಿ ದೀಪಕ್ ಮಿಶ್ರಾ
ನವದೆಹಲಿ: ಕರ್ನಾಟಕ ರಾಜ್ಯಪಾಲ ವಜುಭಾಯಿ ವಾಲಾ ಚುನಾವಣೆಯಲ್ಲಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ ಬಿಜೆಪಿಗೆ ಸರ್ಕಾರ ರಚಿಸಲು ಆಹ್ವಾನ ನಿಡಿರುವುದನ್ನು ಪ್ರಶ್ನಿಸಿ ಕಾಂಗ್ರೆಸ್ ಪಕ್ಷ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.
ಕಾಂಗ್ರೆಸ್ ನ ಅರ್ಜಿಯನ್ನು ವಿಚಾರಣೆಗೆ ನಡೆಸಲು ಸುಪ್ರೀಂ ಮುಖ್ಯ ನ್ಯಾಯಾಧೀಶ ದೀಪಕ್ ಮಿಶ್ರಾ ಸಮ್ಮತಿಸಿದ್ದು ಮಧ್ಯ ರಾತ್ರಿ 1.45ಕ್ಕೆ ವಿಚಾರಣೆ ಪ್ರಾರಂಭಗೊಳ್ಳಲಿದೆ.
ಸುಪ್ರೀಂ ಕೋರ್ಟ್ ರೂಂ ನಂ.2 ನಲ್ಲಿ ವಿಚಾರಣೆ ನಡೆಯಲಿದ್ದು ನ್ಯಾಯಮೂರ್ತಿ ದೀಪಕ್ ಮಿಶ್ರಾ ರಚಿಸಿರುವ ಮೂವರು ನ್ಯಾಯಮೂರ್ತಿಗಳ ಪೀಠ ಅರ್ಜಿ ವಿಚಾರಣೆ ನಡೆಸಲಿದೆ.
ನ್ಯಾ. ಅಶೋಕ್ ಕುಮಾರ್ ಸಿಕ್ರಿ, ನ್ಯಾ. ಅಶೋಕ್ ಭೂಷಣ್ ಹಾಗೂ ನ್ಯಾ.ಶರದ್ ಅರವಿಂದ್ ಬೊಬ್ಬೆ ಅವರಿರುವ ಪೀಠ ಕಾಂಗ್ರೆಸ್, ಜೆಡಿಎಸ್ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಲಿದೆ.
ಕಾಂಗ್ರೆಸ್ ಪರವಾಗಿ ವಕೀಲರಾದ ಅಭಿಷೇಕ್ ಸಿಂಘ್ವಿ ದೀಪಕ್ ಮಿಶ್ರಾ ಅವರ ಮುಂದೆ ವಾದ ಮಂಡನೆ ಮಾಡಲಿದ್ದಾರೆ. ಇದಕ್ಕಾಗಿ ಅವರೀಗಾಗಲೇ ನ್ಯಾಯಾಲಯಕ್ಕೆ ಆಗಮಿಸಿದ್ದಾರೆ.
ಅಲ್ಲದೆ ಸಿಂಘ್ವಿ ನ್ಯಾಯಾಲಯವು ಮಧ್ಯರಾತ್ರಿಯಲ್ಲಿ ತುರ್ತು ವಿಚಾರಣೆಗೆ ಸಮ್ಮತಿಸಿರುವುದರ ಕುರಿತಂತೆ ತಮ್ಮ ಟ್ವೀಟ್ ನಲ್ಲಿ ಸಂತಸ ಹಂಚಿಕೊಂಡಿದ್ದಾರೆ.
ಬೆಳಿಗ್ಗೆ ಒಂಭತ್ತಕ್ಕೆ ನಡೆಯುವ ಬಿ.ಎಸ್. ಯಡಿಯೂರಪ್ಪ ಪ್ರಮಾಣವಚನ ಕಾರ್ಯಕ್ರಮಕ್ಕೆ ತಡೆ ನೀಡುವಂತೆ ಕೋರಿ ಕಾಂಗ್ರೆಸ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com