ಹಂಗಾಮಿ ಸ್ಪೀಕರ್ ಬೋಪಯ್ಯ ಆಯ್ಕೆ ಪ್ರಶ್ನಿಸಿ ಸುಪ್ರೀಂ ಮೊರೆ ಹೋದ ಕಾಂಗ್ರೆಸ್

ಕರ್ನಾಟಕ ರಾಜಕೀಯ ವಿದ್ಯಮಾನಗಳು ಕ್ಷಣ ಕ್ಷಣಕ್ಕೂ ರೋಚಕ ತಿರುವು ಪಡೆದುಕೊಳ್ಳುತ್ತಿದ್ದು, ಹಂಗಾಮಿ ಸ್ಪೀಕರ್...
ಪ್ರಮಾಣವಚನ ಸ್ವೀಕರಿಸುತ್ತಿರುವ ಕೆಜಿ ಬೋಪಯ್ಯ
ಪ್ರಮಾಣವಚನ ಸ್ವೀಕರಿಸುತ್ತಿರುವ ಕೆಜಿ ಬೋಪಯ್ಯ
ನವದೆಹಲಿ: ಕರ್ನಾಟಕ ರಾಜಕೀಯ ವಿದ್ಯಮಾನಗಳು ಕ್ಷಣ ಕ್ಷಣಕ್ಕೂ ರೋಚಕ ತಿರುವು ಪಡೆದುಕೊಳ್ಳುತ್ತಿದ್ದು, ಹಂಗಾಮಿ ಸ್ಪೀಕರ್ ಕೆಜಿ ಬೋಪಯ್ಯ ಅವರ ಆಯ್ಕೆಯನ್ನು ಪ್ರಶ್ನಿಸಿ ಕಾಂಗ್ರೆಸ್ ಶುಕ್ರವಾರ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದೆ.
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ನಾಳೆ ವಿಶ್ವಾಸಮತ ಯಾಚಿಸುವಂತೆ ಸುಪ್ರೀಂಕೋರ್ಟ್ ಸೂಚಿಸಿದ ಬೆನ್ನಲ್ಲೇ ರಾಜ್ಯಪಾಲ ವಜೂಬಾಯಿ ವಾಲಾ ಇಂದು   ಕೆಜಿ ಬೋಪಯ್ಯ ಅವರನ್ನು ಹಂಗಾಮಿ ಸ್ಪೀಕರ್ ಆಗಿನೇಮಕಗೊಳಿಸಿದ್ದಾರೆ. ಆದರೆ, ಈ ನೇಮಕಕ್ಕೆ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಪಡಿಸಿದೆ. 
ಹಿರಿಯ ಶಾಸಕರನ್ನು ಹಂಗಾಮಿ ಶಾಸಕರನ್ನಾಗಿ ಮಾಡಬೇಕು, ಅದನ್ನು ಬಿಟ್ಟು  ಬಿಜೆಪಿಯ ಶಾಸಕರನ್ನು ಹಂಗಾಮಿ ಸ್ಪೀಕರ್ ಆಗಿ ನೇಮಿಸಿರುವುದು ಕಾನೂನಿಗೆ ವಿರುದ್ಧವಾಗಿದೆ ಎಂದು ಕಾಂಗ್ರೆಸ್ ಪರ ವಕೀಲ ಅಭಿಷೇಕ್ ಮನು ಸ್ವಿಂಘ್ವಿ ಹೇಳಿದ್ದಾರೆ.
ಈ ಸಂಬಂಧ  ಅವರು ಸುಪ್ರೀಂಕೋರ್ಟ್ ಹಿರಿಯ ವಕೀಲರಾದ ಕಪಿಲ್ ಸಿಬಲ್ ಹಾಗೂ ಅಭಿಷೇಕ್ ಮನು ಸಿಂಘ್ವಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಪ್ರಕರಣದ ತ್ವರಿತ ವಿಚಾರಣೆ ನಡೆಸಬೇಕು ಎಂದು ಕೋರಿದ್ದಾರೆ.
ಸುಪ್ರಿಂಕೋರ್ಟ್ ರಿಜಿಸ್ಟ್ರಾರ್ ಅರ್ಜಿ ಸ್ವೀಕರಿಸಿದ್ದು, ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರು ಅರ್ಜಿಯ ವಿಚಾರಣೆ ನಡೆಸುವ ಸಾಧ್ಯತೆ ಇದೆ.
ಈ ಮಧ್ಯೆ ಹಂಗಾಮಿ ಸ್ಪೀಕರ್ ಆಗಿ ಕೆ. ಜಿ. ಬೋಪಯ್ಯ ಅವರ ಆಯ್ಕೆಯನ್ನು ಬಿಜೆಪಿ ಸಮರ್ಥಿಸಿಕೊಂಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com