ಇಂದು ಬೆಳಗ್ಗೆ ಟ್ವೀಟ್ ಮಾಡಿ ಶುಭ ಕೋರಿರುವ ಸಿದ್ದರಾಮಯ್ಯ, 'ಜೆಡಿ(ಎಸ್) ರಾಷ್ಟ್ರೀಯ ಅಧ್ಯಕ್ಷರಾದ ಎಚ್.ಡಿ.ದೇವೇಗೌಡರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ವಿರೋಧಪಕ್ಷದ ನಾಯಕರಾಗಿ, ಮುಖ್ಯಮಂತ್ರಿ, ಪ್ರಧಾನಮಂತ್ರಿಯಾಗಿ ಸೇವೆ ಸಲ್ಲಿಸಿರುವ ಕೀರ್ತಿ ನಿಮ್ಮದು. ನಾಡಿನ ನೆಲ,ಜಲ,ಭಾಷೆ ಬಗೆಗಿನ ನಿಮ್ಮ ಬದ್ಧತೆ ನಮಗೆಲ್ಲರಿಗೂ ಸ್ಪೂರ್ತಿದಾಯಕ. ನೂರು ಕಾಲ ಆಯುಷ್ಯ- ಆರೋಗ್ಯ ನಿಮ್ಮದಾಗಲಿ' ಎಂದು ಹಾರೈಸಿದ್ದಾರೆ.