ಬೆಂಗಳೂರು: ವಿಶ್ವಾಸಮತಯಾಚನೆ ಕುರಿತು ಸುಪ್ರೀಂಕೋರ್ಟ್ ನೀಡಿರುವ ಆದೇಶವನ್ನು ನಾವು ಸ್ವಾಗತಿಸುತ್ತೇವೆಂದು ಬಿಜೆಪಿ ಶುಕ್ರವಾರ ಹೇಳಿದೆ,
ಸುಪ್ರೀಂಕೋರ್ಟ್ ಆದೇಶ ಕುರಿತು ಪ್ರತಿಕ್ರಿಯೆ ನೀಡಿರುವ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆಯವರು, ಸುಪ್ರೀಂಕೋರ್ಟ್ ಆದೇಶವನ್ನು ಸ್ವಾಗತಿಸುತ್ತೇವೆ. ಬಹುಮತ ಸಾಬೀತುಪಡಿಸಲು ನಾವು ಸಿದ್ಧರಿದ್ದೇವೆ. ನಾಳೆ ಸದನದಲ್ಲಿ ನಡೆಯುವ ವಿಶ್ವಾಸ ಮತಯಾಚನೆ ವೇಳೆ ಬಹುಮತ ಸಾಬೀತು ಪಡಿಸುತ್ತೇವೆಂದು ಹೇಳಿದ್ದಾರೆ.
ನೂತನವಾಗಿ ಅಧಿಕಾರ ಸ್ವೀಕರಿಸಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸರ್ಕಾರ ನಾಳೆ(ಶನಿವಾರ) ಸಂಜೆ ನಾಲ್ಕು ಗಂಟೆಗೆ ಬಹುಮತ ಸಾಬೀತುಪಡಿಸಲು ಸುಪ್ರೀಂಕೋರ್ಟ್ ಮಹತ್ವದ ಆದೇಶ ನೀಡಿದೆ.