ಮುಂದುವರೆದ 'ಆಪರೇಷನ್ ಕಮಲ ಭೀತಿ': ಶಾಸಕರ ಮೇಲೆ ಹದ್ದಿನ ಕಣ್ಣಿಟ್ಟಿರುವ ಜೆಡಿಎಸ್-ಕಾಂಗ್ರೆಸ್ ನಾಯಕರು

ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳಿಗೆ ಆಪರೇಷನ್ ಕಮಲ ಭೀತಿ ಮುಂದುವರೆದಿದ್ದು, ತಮ್ಮ ತಮ್ಮ ಶಾಸಕರುಗಳ ಮೇಲೆ ನಾಯಕರು ಹದ್ದಿನ ಕಣ್ಣಿಟ್ಟಿದ್ದಾರೆಂದು ತಿಳಿದುಬಂದಿದೆ...
ಮುಂದುವರೆದ 'ಆಪರೇಷನ್ ಕಮಲ ಭೀತಿ': ಶಾಸಕರ ಮೇಲೆ ಹದ್ದಿನ ಕಣ್ಣಿಟ್ಟಿರುವ ಜೆಡಿಎಸ್-ಕಾಂಗ್ರೆಸ್ ನಾಯಕರು
ಮುಂದುವರೆದ 'ಆಪರೇಷನ್ ಕಮಲ ಭೀತಿ': ಶಾಸಕರ ಮೇಲೆ ಹದ್ದಿನ ಕಣ್ಣಿಟ್ಟಿರುವ ಜೆಡಿಎಸ್-ಕಾಂಗ್ರೆಸ್ ನಾಯಕರು
Updated on: 
ಬೆಂಗಳೂರು; ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳಿಗೆ ಆಪರೇಷನ್ ಕಮಲ ಭೀತಿ ಮುಂದುವರೆದಿದ್ದು, ತಮ್ಮ ತಮ್ಮ ಶಾಸಕರುಗಳ ಮೇಲೆ ನಾಯಕರು ಹದ್ದಿನ ಕಣ್ಣಿಟ್ಟಿದ್ದಾರೆಂದು ತಿಳಿದುಬಂದಿದೆ. 
ಚುನಾವಣೆ ಅಂತಿಮಗೊಂಡ ಬಳಿಕ ರೆಸಾರ್ಟ್ ನಲ್ಲಿಯೇ ವಾಸ್ತವ್ಯ ಹೂಡಿದ್ದ ಕಾಂಗ್ರೆಸ್ ಶಾಸಕರ ಪೈಕಿ ಕೆಲವರು ಮಾತ್ರ ತಮ್ಮ ತಮ್ಮ ಸ್ವಕ್ಷೇತ್ರಗಳಲ್ಲ ಮುಖ ಮಾಡಿದ್ದಾರೆಂದು ತಿಳಿದುಬಂದಿದೆ. ಕಳೆದ 5-6 ದಿನಗಳಿಂದ ರೆಸಾರ್ಟ್ ಹಾಗೂ ಹೋಟೆಲ್ ನಲ್ಲಿಯೇ ವಾಸ್ತವ್ಯ ಹೂಡಿದ್ದ ಬಹುತೇಕ ಶಾಸಕರಿಗೆ ತಮ್ಮ ಕ್ಷೇತ್ರಗಳಿಗೆ ತೆರಳಲು ಸಾಧ್ಯವಾಗಿರಲಿಲ್ಲ. ಆಪರೇಷನ್ ಕಮನ ಭೀತಿ ಹಿನ್ನಲೆಯಲ್ಲಿ ಶಾಸಕರನ್ನು ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ರೆಸಾರ್ಟ್ ನಲ್ಲಿಟ್ಟುಕೊಂಡಿದ್ದರು. 
ಇದೀಗ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಿದ ಬಲಿಕ ವಿಶ್ವಾಸ ಮತಯಾಚನೆ ಪರೀಕ್ಷೆ ಅಂತ್ಯಗೊಂಡ ಹಿನ್ನಲೆಯಲ್ಲಿ ಕೆಲ ಕಾಂಗ್ರೆಸ್ ಶಾಸಕರು ಹೋಟೆಲ್ ಹಾಗೂ ರೆಸಾರ್ಟ್ ಗಳಿಂದ ತಮ್ಮ ತಮ್ಮ ನಿವಾಸಕ್ಕೆ ತೆರಳಲು ಮುಂದಾಗಿದ್ದಾರೆಂದು ತಿಳಿದುಬಂದಿದೆ. 
ಕಾಂಗ್ರೆಸ್'ನ ಹಿರಿಯ ಶಾಸಕರಾದ ಕೆ.ಜೆ.ಜಾರ್ಜ್, ರಾಮಲಿಂಗಾ ರೆಡ್ಡಿ, ಯು.ಟಿ.ಖಾದರ್, ಎಂ.ಬಿ.ಪಾಟೀಲ್, ರೋಷನ್ ಬೇಗ್ ಮುಂತಾದ ಶಾಸಕರು ಸ್ವಕ್ಷೇತ್ರದಲ್ಲ ಮುಖ ಮಾಡಿದಾದಾರೆಂದು ವರದಿಗಳು ತಿಳಿಸಿವೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com