ಶಾಮನೂರು ಶಿವಶಂಕರಪ್ಪಗೆ ಡಿಸಿಎಂ ಪಟ್ಟ ನೀಡಿ: ವೀರಶೈವ ಮಹಾಸಭಾ ಆಗ್ರಹ

ಹಿರಿಯ ಕಾಂಗ್ರೆಸ್ ಮುತ್ಸದ್ದಿ ಶಾಮನೂರು ಶಿವಶಂಕರಪ್ಪ ಅವರಿಗೆ ನೂತನವಾಗಿ ರಚನೆಯಾಗಲಿರುವ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿ ಸ್ಥಾನ .....
ಶಾಮನೂರು ಶಿವಶಂಕರಪ್ಪ
ಶಾಮನೂರು ಶಿವಶಂಕರಪ್ಪ
Updated on
ಬೆಂಗಳೂರು: ಹಿರಿಯ ಕಾಂಗ್ರೆಸ್ ಮುತ್ಸದ್ದಿ ಶಾಮನೂರು ಶಿವಶಂಕರಪ್ಪ ಅವರಿಗೆ ನೂತನವಾಗಿ ರಚನೆಯಾಗಲಿರುವ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಒತ್ತಾಯ ಕೇಳಿಬಂದಿದೆ.
ರಾಜ್ಯದ ವೀರಶೈವ ಮಹಾಸಭಾ ಬೆಂಗಳೂರು ಘಟಕವು ಈ ಸಂಬಂಧ ನಿಯೋಜಿತ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಪತ್ರ ಬರೆದಿದೆ.
ಬಿಜೆಪಿ ಅಲೆಯ ಹೊರತಾಗಿಯೂ ಕಾಂಗ್ರೆಸ್ ಹಾಗೂ ಜೆಡಿಎಸ್ ನಿಂದ ಒಟ್ಟು 20  ಲಿಂಗಾಯತ, ವೀರಶೈವ ಅಭ್ಯರ್ಥಿಗಳು ಶಾಸಕರಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ನಲ್ಲಿ ಬೇರೆಲ್ಲಾ ಸಮುದಾಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಲಿಂಗಾಯತ-ವೀರಶೈವ ಶಾಸಕರು ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ನಿಂದ ಒಟ್ಟು 16 ಲಿಂಗಾಯತ-ವೀರಶೈವ ಶಾಸಕರು ಆಯ್ಕೆಗೊಂಡರೆ ಜೆಡಿಎಸ್ ನಿಂದ ನಾಲ್ವರು ಚುನಾಯಿತರಾಗಿದ್ದಾರೆ.
ಇದೀಗ ಮೈತ್ರಿಕೂಟದ ಸರ್ಕಾರಕ್ಕೆ ಲಿಂಗಾಯತ ಸಮುದಾಯದ ಬೆಂಬಲ ಗಟ್ಟಿಯಾಗಿದೆ.ಹೀಗಾಗಿ ಈ ಸಮುದಾಯಕ್ಕೆ ಸೇರಿದ ಹಿರಿಯ ರಾಜಕಾರಣಿ ಶಾಮನೂರು ಶಿವಶಂಕರಪ್ಪ ಅವರನ್ನೇ ಉಪ ಮುಖ್ಯಮಂತ್ರಿಗಳನ್ನಾಗಿ ನೇಮಕ ಮಾಡಬೇಕು. ಒಟ್ಟು ಐವರು ಶಾಸಕರನ್ನು ಮಂತ್ರಿ ಸ್ಥಾನಕ್ಕೆ ನೇಮಕ ಮಾಡಬೇಕು ಎಂದು  ಅಖಿಲ ಭಾರತ ವೀರಶೈವ ಮಹಾಸಭಾ ಬೆಂಗಳೂರು ಘಟಕ ಅಧ್ಯಕ್ಷ ಕೇಶವಕುಮಾರ್​ ಪತ್ರದಲ್ಲಿ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com