ವಿಶ್ವಾಸಮತ ಯಾಚನೆವರೆಗೂ ದೆಹಲಿಗೆ ಬರಬೇಡಿ: ಕೈ ನಾಯಕರಿಗೆ ರಾಹುಲ್ ಗಾಂಧಿ ಕಟ್ಟಪ್ಪಣೆ

Published On :
ನವದೆಹಲಿ: ಸಚಿವ ಸ್ಥಾನಕ್ಕಾಗಿ ಲಾಬಿ ಮಾಡಲು ದೆಹಲಿಗೆ ಹೋಗಲು ಮುಂದಾಗಿದ್ದ ರಾಜ್ಯ ಕಾಂಗ್ರೆಸ್ ನಾಯಕರಿಗೆ ಕಾಂಗ್ರೆಸ್ ಹೈಕಮಾಂಡ್ ಶಾಕ್ ನೀಡಿದ್ದು, ವಿಶ್ವಾತಮತ ಯಾಚನೆವರೆಗೂ ದೆಹಲಿಗೆ ಬರಬೇಡಿ ಕಟ್ಟಪ್ಪಣೆ ಜಾರಿ ಮಾಡಿದೆ.
ಲಾಬಿ ಮಾಡುವುದಕ್ಕೆ ನೀವು ಯಾರೂ ದೆಹಲಿಗೆ ಬರುವುದೇ ಬೇಡ. ಮೊದಲು ವಿಶ್ವಾಸ ಮತ ಗೆಲ್ಲಿ. ಆ ಮೇಲೆ ದೆಹಲಿಗೆ ಬನ್ನಿ ಎಂದು ರಾಹುಲ್ ಗಾಂಧಿ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಜಿ ಪರಮೇಶ್ವರ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರ ಸೋಮವಾರದ ದೆಹಲಿ ಭೇಟಿ ರದ್ದಾಗಿದೆ ಎನ್ನಲಾಗಿದೆ.
ಆದರೆ ಸರ್ಕಾರ ರಚನೆ ಸಂಬಂಧ ಚರ್ಚೆ ನಡೆಸಲು ನಿಯೋಜಿತ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮತ್ತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಮಾತ್ರ ದೆಹಲಿಗೆ ತೆರಳಿ ಹೈಕಮಾಂಡ್ ಭೇಟಿ ಮಾಡಿ ಮಾತುಕತೆ ನಡೆಸಿ ವಾಪಸ್ ಆಗಲಿದ್ದಾರೆ. ಕುಮಾರಸ್ವಾಮಿ ಜೊತೆಗೆ ರಾಜ್ಯಸಭಾ ಸದಸ್ಯ ಹಾಗೂ ಕೆಪಿಸಿಸಿ ಕಾರ್ಯದರ್ಶಿ ಜಿ.ಸಿ.ಚಂದ್ರಶೇಖರ್ ಅವರೂ ಕೂಡ ದೆಹಲಿಗೆ ತೆರಳಲಿದ್ದಾರೆ ಎಂದು ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ಮೂಲಗಳು ತಿಳಿಸಿವೆ.
ಇನ್ನು ಬುಧವಾರ ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಎಚ್.ಡಿ.ಕುಮಾರಸ್ವಾಮಿ ಅವರು ಪ್ರಮಾಣವಚನ ಸ್ವೀಕರಿಸಲಿದ್ದು, ಈ ಕಾರ್ಯಕ್ರಮಕ್ಕೆ ಮೈತ್ರಿ ಮೂಲಕ ಅಧಿಕಾರ ಭಾಗ್ಯ ಕೊಟ್ಟ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಸೇರಿದಂತೆ ದೇಶದ ವಿವಿಧ ರಾಜಕೀಯ ಪಕ್ಷಗಳ ಗಣ್ಯರನ್ನು ಆಹ್ವಾನಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ನವದೆಹಲಿCongressಕಾಂಗ್ರೆಸ್New DelhiJDSPoliticsರಾಜಕೀಯಜೆಡಿಎಸ್Rahul Gandhiರಾಹುಲ್ ಗಾಂಧಿKarnataka Assembly Electionಕರ್ನಾಟಕ ವಿಧಾನಸಭೆ ಚುನಾವಣೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


