ಹೆಚ್ ಡಿ ಕುಮಾರಸ್ವಾಮಿ-ಡಿಕೆ ಶಿವಕುಮಾರ್
ರಾಜಕೀಯ
ಕರ್ನಾಟಕದಲ್ಲಿ ಜಾತ್ಯಾತೀತ ಸರ್ಕಾರಕ್ಕಾಗಿ ಭಿನ್ನಾಭಿಪ್ರಾಯ ಮರೆತು ಮೈತ್ರಿ: ಡಿಕೆ ಶಿವಕುಮಾರ್
ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಸರ್ಕಾರ ರಚನೆಯಾಗಲಿದ್ದು, ಸರ್ಕಾರ ರಚನೆಗೆ ಮುನ್ನ ಜೆಡಿಎಸ್ ಗೆ ಬೇಷರತ್ ಬೆಂಬಲ ನೀಡಿದ್ದ ಕಾಂಗ್ರೆಸ್ ಈಗ ಮಂತ್ರಿಗಿರಿಯ ಕುರಿತು ಜೆಡಿಎಸ್ ನೊಂದಿಗೆ ಚೌಕಾಸಿಗಿಳಿದಿದೆ.
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಸರ್ಕಾರ ರಚನೆಯಾಗಲಿದ್ದು, ಸರ್ಕಾರ ರಚನೆಗೆ ಮುನ್ನ ಜೆಡಿಎಸ್ ಗೆ ಬೇಷರತ್ ಬೆಂಬಲ ನೀಡಿದ್ದ ಕಾಂಗ್ರೆಸ್ ಈಗ ಮಂತ್ರಿಗಿರಿಯ ಕುರಿತು ಜೆಡಿಎಸ್ ನೊಂದಿಗೆ ಚೌಕಾಸಿಗಿಳಿದಿದೆ.
ಈ ಬೆಳವಣಿಗೆಗಳ ನಡುವೆ ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ನೀಡಿರುವ ಹೇಳಿಕೆ ಕುತೂಹಲ ಮೂಡಿಸಿದೆ. ರಾಜ್ಯದಲ್ಲಿ ಜಾತ್ಯಾತೀತ ಸರ್ಕಾರ ರಚನೆಯಾಗಲು ಕಾಂಗ್ರೆಸ್-ಜೆಡಿಎಸ್ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಿಕೊಳ್ಳಬೇಕು ಎಂದು ಹೇಳಿದ್ದಾರೆ. ರಾಜ್ಯ ವಿಧಾನಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್-ಜೆಡಿಎಸ್ ಪರಸ್ಪರ ಕೆಸೆರೆರೆಚಾಟದಲ್ಲಿ ತೊಡಗಿದುದ್ ನಿಜ, ರಾಜಕೀಯವಾಗಿ ನಾನು 1985 ರಿಂದ ದೇವೇಗೌಡರ ವಿರುದ್ಧವಾಗಿ ಹೋರಾಡುತ್ತಿದ್ದೇನೆ. ಕಳೆದ ವಿಧಾನಸಭಾ ಚುನಾವಣೆ ಹಾಗೂ ವಿಧಾನಸಭಾ ಚುನವಾಣೆಗಳಲ್ಲಿ ಜೆಡಿಎಸ್ ವಿರುದ್ಧ ನಾವು ಸ್ಪರ್ಧಿಸಿ ಗೆದ್ದಿದ್ದೇವೆ. ದೇವೇಗೌಡರ ಸೊಸೆಯ ವಿರುದ್ಧವೂ ನಾವು ಚುನಾವಣೆಯಲ್ಲಿ ಗೆದ್ದಿದ್ದೇವೆ, ಸಾಕಷ್ಟು ರಾಜಕೀಯ ಮಾಡಿದ್ದೇವೆ, ಸಾಕಷ್ಟು ಪ್ರಕರಣಗಳನ್ನೂ ದಾಖಲಿಸಲಾಗಿದೆ. ಆದರೆ ರಾಷ್ಟ್ರದ ಹಿತದೃಷ್ಟಿಯಿಂದ ಹಾಗೂ ಪಕ್ಷದ ಹಿತದೃಷ್ಟಿಯಿಂದ ರಾಜ್ಯದಲ್ಲಿ ಸೆಕ್ಯುಲರ್ ಸರ್ಕಾರದ ಅವಶ್ಯಕತೆ ಇದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
ರಾಹುಲ್ ಗಾಂಧಿ ಸಹ ರಾಜ್ಯದಲ್ಲಿ ಜಾತ್ಯಾತೀತ ಸರ್ಕಾರ ರಚನೆಯಾಗಬೇಕೆಂಬ ನಿರ್ಧಾರಕ್ಕೆ ಬಂದಿದ್ದು, ಈ ಉದ್ದೇಶದಿಂದ ಕಹಿ ನುಂಗಿಕೊಂಡು ಜೆಡಿಎಸ್ ಜೊತೆಗೆ ಸರ್ಕಾರ ರಚನೆ ಮಾಡುತ್ತಿದ್ದೇವೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ