ಸಂಪುಟ ಕಸರತ್ತು : ಕಾಂಗ್ರೆಸ್ 22, ಜೆಡಿಎಸ್ ಗೆ 12 ಸ್ಥಾನ - ಕೆ. ಸಿ. ವೇಣುಗೋಪಾಲ್

ನೂತನ ಕಾಂಗ್ರೆಸ್ , ಜೆಡಿಎಸ್ ಮೈತ್ರಿ ಸರ್ಕಾರದ ಸಂಪುಟ ಕಸರತ್ತು ಮುಂದುವರೆದಿದ್ದು, ಕಾಂಗ್ರೆಸ್ 22, ಜೆಡಿಎಸ್ 12 ಸಚಿವರನ್ನು ಹೊಂದಲಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್ ತಿಳಿಸಿದ್ದಾರೆ.
ಕೆ. ಸಿ. ವೇಣುಗೋಪಾಲ್
ಕೆ. ಸಿ. ವೇಣುಗೋಪಾಲ್
Updated on: 

ಬೆಂಗಳೂರು :  ಕಾಂಗ್ರೆಸ್ , ಜೆಡಿಎಸ್  ಮೈತ್ರಿ ಸರ್ಕಾರದ ಸಂಪುಟ ಕಸರತ್ತು ಮುಂದುವರೆದಿದ್ದು,  ಕಾಂಗ್ರೆಸ್ 22, ಜೆಡಿಎಸ್ 12 ಸಚಿವರನ್ನು ಹೊಂದಲಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್ ತಿಳಿಸಿದ್ದಾರೆ.

ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಉಪಮುಖ್ಯಮಂತ್ರಿಯಾಗಿ ನಾಳೆ ಕುಮಾರಸ್ವಾಮಿ ಅವರೊಂದಿಗೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕ ರಮೇಶ್ ಕುಮಾರ್ ಸ್ಪೀಕರ್ ಆಗಲಿದ್ದಾರೆ. ಉಪ ಸ್ಪೀಕರ್ ಸ್ಥಾನವನ್ನು ಜೆಡಿಎಸ್ ಪಕ್ಷಕ್ಕೆ ಬಿಟ್ಟುಕೊಡಲಾಗಿದೆ ಎಂದು ಅವರು ಹೇಳಿದರು.

ಸಂಪುಟ ರಚನೆ ಸಂಬಂಧ ಬೆಂಗಳೂರಿನಲ್ಲಿಂದು  ಕಾಂಗ್ರೆಸ್ ಹಾಗೂ ಜೆಡಿಎಸ್  ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವೇಣುಗೋಪಾಲ್,  ಲಿಂಗಾಯಿತರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕೆಂಬ ಬೇಡಿಕೆ ಇದೆ. ಆದರೆ, ಈ ಬಗ್ಗೆ ಸಭೆಯಲ್ಲಿ ಯಾವುದೇ ಚರ್ಚೆ ನಡೆದಿಲ್ಲ ಎಂದು ತಿಳಿಸಿದರು.


ಮೇ 25 ರಂದು ಸ್ಪೀಕರ್ ಹಾಗೂ ಉಪ ಸ್ಪೀಕರ್ ಚುನಾವಣೆ ನಡೆಯಲಿದ್ದು, ನಾಡಿದ್ದು, ಖಾತೆಗಳನ್ನು ಅಂತಿಮಗೊಳಿಸಲಾಗುವುದು ಎಂದು ಅವರು ಹೇಳಿದರು.


Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com